ಕುಶಾಲನಗರ, ಅ 07: ಮಲ್ಲಿಕಾರ್ಜುನ ನಗರ ಅಂಗನವಾಡಿ ಕೇಂದ್ರದಲ್ಲಿ 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಗೌರವಪೂರ್ವಕವಾಗಿ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಉಪಸ್ಥಿತರಿದ್ದು, ಪೋಷಣ್ ಮಾಸಾಚರಣೆಯ ಮಹತ್ವ, ಸಮತೋಲಿತ ಪೌಷ್ಟಿಕ ಆಹಾರ ಹಾಗೂ ಮಾತೃ ವಂದನಾ ಯೋಜನೆಯ ಕುರಿತು ಫಲಾನುಭವಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು.
36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ನೇತ್ರಾವತಿ ಅವರ ಸೇವೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಿ, ಪ್ರಶಂಸಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್ವರ ನಗರ ಅಂಗನವಾಡಿ ಕಾರ್ಯಕರ್ತೆ ಇಂದಿರಾ ನೆರವೇರಿಸಿದರು. ಜ್ಯೋತಿ ಪ್ರಾರ್ಥನೆ ಸಲ್ಲಿಸಿದರು. ಮುತ್ತಮ್ಮ ಸ್ವಾಗತಿಸಿದರು. ಸುಜಾತ ವಂದನಾರ್ಪಣೆ ನೆರವೇರಿಸಿದರು.
Back to top button
error: Content is protected !!