ಕುಶಾಲನಗರ, ಅ 10: ಕುಶಾಲನಗರ ತಾಲೂಕು ಗುಡ್ಡೆಹೊಸುರು ಗ್ರಾಮ ಪಂಚಾಯಿತಿಗೆ ಒಳಪಡುವ ಬಾಳುಗೋಡು ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಮಳೆ ಬಂದಾಗ ಈ ಗುಂಡಿಗಳಲ್ಲಿ ನೀರು ನಿಂತುಕೊಳ್ಳುವುದರಿಂದ ರಸ್ತೆ ಮತ್ತು ಗುಂಡಿಗಳು ಸರಿಯಾಗಿ ಕಾಣದೆ ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಒಂದೆರಡು ದಿನಗಳ ಹಿಂದೆ ದ್ವಿಚಕ್ರ ವಾಹನ ಆಘಾತಕ್ಕೊಳಗಾಗಿದೆ.
ರಸ್ತೆಯ ಮೇಲೆ ಮಣ್ಣು, ಜಲ್ಲಿ ಹಾಗೂ ನೀರು ತುಂಬಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯಲ್ಲಿ ಅಪಘಾತ ಸಂಭವಿಸುವ ಆತಂಕವೂ ಸಾರ್ವಜನಿಕರಲ್ಲಿ ಮನೆಮಾಡಿದೆ.
ರಸ್ತೆಯ ದುಸ್ಥಿತಿಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ಈ ಮಾರ್ಗವಾಗಿ ಪ್ರತಿದಿನ ಸಂಚರಿಸುವವರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಥವಾ ರಸ್ತೆ ನಿರ್ವಹಣೆಗೆ ಜವಾಬ್ದಾರರಾಗಿರುವ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದಿನನಿತ್ಯ ಪ್ರವಾಸಿಗರು ಇದೇ ರಸ್ತೆಯಲ್ಲಿ ತಿರುಗಾಡುತ್ತಿರುತ್ತಾರೆ ( ದುಬಾರೆ. ಚಿಕ್ಲಿ ಹೊಳೆ)
ಒಂದು ತಿಂಗಳ ಹಿಂದೆ ಇದೇ ಜಾಗಕ್ಕೆ ಗುದ್ದಲಿ ಪೂಜೆಯು ಕೂಡ ನಡೆದಿತ್ತು ತಿಂಗಳು ಕಳೆದರೂ ಏನು ಪ್ರಯೋಜನವಿಲ್ಲ
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ರಸ್ತೆಯ ಗುಂಡಿಗಳನ್ನು ಮುಚ್ಚಿ ಶಾಶ್ವತ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ರೋಹಿತ್ ಪಾಣತ್ತಲೆ ಆಗ್ರಹಿಸಿದ್ದಾರೆ
Back to top button
error: Content is protected !!