ಕುಶಾಲನಗರ,ಅ.11:ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರು ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಇಂದು ದೇಶದ ದೊಡ್ಡ ಸಾಂಸ್ಕ್ರತಿಕ
ಹಬ್ಬವಾಗಿ ರಾಷ್ಟ್ರೀಯತೆ ಹಾಗೂ ಭಾವೈಕ್ಯತೆಯನ್ನು ಎತ್ತಿ ಹಿಡಿದಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಬಸ್ ನಿಲ್ದಾಣದ ಬಳಿಯ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ
ವಿನಾಯಕ ಸೇವಾ ಬಳಗದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶೋತ್ಸವದ ವಿಸರ್ಜನಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಗ್ರಾಮಸ್ಥರನ್ನುದ್ದೇಶಿಸಿ
ಮಾತನಾಡಿದರು.
ಸ್ವಾತಂತ್ರ್ಯ ಸಂಗ್ರಾಮದ ಐಕ್ಯತೆಯ ಪ್ರತೀಕ ಗಣೇಶ ಚತುರ್ಥಿ. ಭಕ್ತಿ ಹಾಗೂ ಭಾವೈಕ್ಯತೆಯ ಹಿನ್ನೆಲೆಯಲ್ಲಿ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಗಣೇಶ ಹಬ್ಬವು ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಹಬ್ಬವಾಗಿದೆ ಎಂದು ಬಣ್ಣಿಸಿದರು.
ಭಕ್ತಿ ಹಾಗೂ ಭಾವೈಕ್ಯತೆಯ ಹಿನ್ನೆಲೆಯಲ್ಲಿ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಗಣೇಶ ಹಬ್ಬವು ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಹಬ್ಬ. ಚದುರಿ ಹೋಗಿದ್ದ ಅಂದಿನ ಅನಕ್ಷರಸ್ಥ ಸಮಾಜದಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಒಂದೇ ವೇದಿಕೆಯಡಿ ಏಕೀಕರಣಗೊಳಿಸಲು ತಿಲಕರು ಆಯ್ಕೆ ಮಾಡಿದ್ದೇ ಈ ಗಣೇಶ ಹಬ್ಬವನ್ನು. ಜನರೂ ಅಷ್ಟೇ. ತಿಲಕರ ಕರೆಗೆ ಜಾತಿ-ಮತ ಬೇಧವಿಲ್ಲದೆ ಬಹುಬೇಗನೆ ಸ್ಪಂದಿಸಿದರು ಎಂದು ಸಂಸದ ಯದುವೀರ್ ಹೇಳಿದರು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಗ್ರಾಮಸ್ಥರು ಒಗ್ಗಟ್ಟು ಕಾಪಾಡಿಕೊಂಡು ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂದರು.
ಗ್ರಾಮ ದೇವಾಲಯ ಸಮಿತಿಯ
ಅಧ್ಯಕ್ಷ ಟಿ.ಬಿ.ಜಗದೀಶ್, ಕಾರ್ಯದರ್ಶಿ ಟಿ.ಎಲ್.ಮಹೇಶ್ ಕುಮಾರ್, ಗೌರವಾಧ್ಯಕ್ಷ ಟಿ.ಡಿ.ಈಶ್ವರ, ವಿನಾಯಕ ಸೇವಾ ಬಳಗದ ಅಧ್ಯಕ್ಷ ಚಲುವ, ಕಾರ್ಯದರ್ಶಿ
ಎ.ಎಂ.ಅಣ್ಣಯ್ಯ,
ಗ್ರಾ.ಪಂ.ಮಾಜಿ ಅಧ್ಯಕ್ಷರಾದ ದೇವರಾಜ್, ಟಿ.ಕೆ.ವಸಂತ, ರೂಪಾ ಮಹೇಶ್, ಗ್ರಾ.ಪಂ.ಮಾಜಿ ಸದಸ್ಯ ಟಿ.ಸಿ.ಶಿವಕುಮಾರ್,
ದೇವಾಲಯ ಸಮಿತಿಯ ಪ್ರಮುಖರಾದ ಟಿ.ಎಚ್.ಸೋಮಚಾರಿ, ಟಿ.ಜಿ.ಶಿವಣ್ಣ, ಟಿ.ಎಸ್.ತೋಟೇಶ್, ಟಿ.ಬಿ.ಚಿದಾನಂದ, ಟಿ.ಡಿ.ಶಿವಾನಂದ, ಸ್ಥಳೀಯರಾದ ಟಿ.ಸಿ.ಜಗದೀಶ್( ಸುನಿಲ್ ),
ಗಣೇಶ್,
ಸಂಸದರಿಗೆ ಮನವಿ ಸಲ್ಲಿಕೆ:
ತೊರೆನೂರು ಗ್ರಾಮ ದೇವಾಲಯ ಸಮಿತಿಯ
ಅಧ್ಯಕ್ಷ ಟಿ.ಬಿ.ಜಗದೀಶ್ ಹಾಗೂ ಕಾರ್ಯದರ್ಶಿ ಟಿ.ಎಲ್.ಮಹೇಶ್ ಕುಮಾರ್ ನೇತೃತ್ವದಲ್ಲಿ ತೊರೆನೂರು ಗ್ರಾಮದಿಂದ ನೆರೆಯ ಮೈಸೂರು ಜಿಲ್ಲೆಯ ಹೊನ್ನಾಪುರ ಗ್ರಾಮದ ಮೂಲಕ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮಸ್ಥರ ಮನವಿಗೆ ಸ್ಪಂದಿಸುವುದಾಗಿ ಸಂಸದ ಯದುವೀರ್ ಪ್ರತಿಕ್ರಿಯಿಸಿದರು.
ಸನ್ಮಾನ:
ಇದೇ ವೇಳೆ ಗ್ರಾಮ ದೇವಾಲಯ ಸಮಿತಿ ವತಿಯಿಂದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
Back to top button
error: Content is protected !!