ಕುಶಾಲನಗರ, ಅ 18: ಕಾವೇರಿ ಸಂಕ್ರಮಣ ಹಿನ್ನೆಲೆಯಲ್ಲಿ
ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ತೀರ್ಥ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ವೃತ್ತದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ದಿನದ ವಿಶೇಷ ಪೂಜೆ ನೆರವೇರಿಸಲಾಯಿತು. ಅರ್ಚಕ ಪುರುಷೋತ್ತಮ್ ಭಟ್ ಪೂಜಾ ವಿಧಿ ನೆರವೇರಿಸಿದರು.
ಎಸ್.ಎಲ್.ಎನ್.ಸಮೂಹ ಸಂಸ್ಥೆಯ ಪ್ರಮುಖರಾದ ನಾರಾಯಣ್, ಸಾತಪ್ಪನ್ ಮತ್ತು ವಿಶ್ವನಾಥನ್ ಕುಟುಂಬಸ್ಥರು ಪೂಜೆ ನೆರವೇರಿಸಿ ತೀರ್ಥ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು.
ಸೋಮವಾರಪೇಟೆ ಮತ್ತು ಮರಗೋಡಿನಲ್ಲಿ ತೀರ್ಥ ಪ್ರಸಾದ ವಿತರಣೆಗೆ ತೆರಳುವ ವಾಹನಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಬೀಳ್ಕೊಡಲಾಯಿತು.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕಾವೇರಿ ಸಂರಕ್ಷಣೆ ಎಲ್ಲರ ಪ್ರಮುಖ ಆದ್ಯತೆಯಾಗಬೇಕಿದೆ. ತಾಯಿ ಕಾವೇರಿ ಎಲ್ಲರಿಗೂ ಸಮೃದ್ದಿ ಕರುಣಿಸಲಿ. ಕಳೆದ 14 ವರ್ಷಗಳಿಂದ ಪ್ರತಿ ವರ್ಷ ತೀರ್ಥ ವಿತರಣೆ, ಅನ್ನಸಂತರ್ಪಣೆ ನೆರವೇರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಈ ಸಂದರ್ಭ ಮಾತನಾಡಿದ ಸಂಘದ ಪ್ರಮುಖರಾದ ರವೀಂದ್ರ ಪ್ರಸಾದ್, ಉತ್ತಮ ಮಳೆಯಾಗುವ ಮೂಲಕ ನಾಡಿನ ಸಂರಕ್ಷಣೆಗೆ ಕೋರಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.
ಸಾವಿರಾರು ಮಂದಿ ಕ್ಷೇತ್ರಕ್ಕೆ ಆಗಮಿಸಿ ತೀರ್ಥ ಪ್ರಸಾದ ಪಡೆದರು.
ಈ ಸಂದರ್ಭ ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ರೋಟರಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಮನು ಪೆಮ್ಮಯ್ಯ, ಸಂಘದ ಪ್ರಮುಖರಾದ ಬಬೀಂದ್ರಪ್ರಸಾದ್, ವಿಜೇಂದ್ರ ಪ್ರಸಾದ್,
ಮೈಸೂರು ಜಿಲ್ಲಾ ಬಿಜೆಪಿ ಮುಖಂಡ ಚಂದ್ರು ಬೆಮ್ಮತ್ತಿ, ಮಹಾನ್, ರಾಜರಾಜೇಶ್ವರಿ ಚಂದ್ರು, ತಿಲಕ್ ಪೂಜಾರಿ, ರುದ್ರ,
ಜಬೀಬುಲ್ಲಾ, ಹೇಮಂತ್ ರಾವ್, ಅಬೀಬ್ ರೆಹಮಾನ್, ಕಿಶನ್ ಕಾರ್ಯಪ್ಪ, ವಿನಿತ್ ಕುಮಾರ್, ರವಿಕಿರಣ್, ಅಜೀಜ್, ರಘು, ರಾಜ ಕಡಗದಾಳು ಸೇರಿದಂತೆ ಸಂಘದ ಪ್ರಮುಖರು ಇದ್ದರು.
Back to top button
error: Content is protected !!