ಧಾರ್ಮಿಕ

ಕುಶಾಲನಗರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೋತ್ಸವ

ಕುಶಾಲನಗರ, ಅ 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸೋಮವಾರಪೇಟೆ ಯೋಜನಾ ಕಚೇರಿ ಕುಶಾಲನಗರ ವಲಯ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕುಶಾಲನಗರ ವಲಯ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ರಾಘವೇಂದ್ರ ಭಟ್ ಎಚ್ ರವರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮ ನಡೆಸಲಾಯಿತು.60 ದಂಪತಿ ಪೂಜೆಯಲ್ಲಿ ಪಾಲ್ಗೊಂಡರು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಶೇಖರ್ ಕೆ ಎಸ್ ವಹಿಸಿದರು. ಧಾರ್ಮಿಕ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಔಘಡ್ ಫೀರ್ ಯೋಗಿ ರಾಜೇಶ್ ನಾಥ್ ಜಿ ಗುರುಗಳು ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರ ಅರಸಿನಗುಪ್ಪೆ ಸಿದ್ದಲಿಂಗಪುರ ಇವರು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಠಲ ಸಾಲಿಯನ್ ರವರು ಮಾತನಾಡಿ ಯೋಜನೆಯ ಸುಜ್ಞಾನಿಧಿ ಶಿಷ್ಯವೇತನ, ಕೆರೆ ಕಾಮಗಾರಿ ಅಭಿವೃದ್ಧಿ, ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸತ್ಯನಾರಾಯಣ ಸ್ವಾಮಿಯ ಪೂಜೆಯ ಮಹತ್ವ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು ಹಾಗೂ ದೇವರ ಆಶೀರ್ವಾದದಿಂದ ಸಂಪತ್ತು ಹಾಗೂ ಸಮೃದ್ಧಿಯ ಲಭಿಸುತ್ತದೆ ಎಂದು ಉತ್ತಮ ಮಾಹಿತಿ ನೀಡಿದರು. ಸಭಾಧ್ಯಕ್ಷತೆ ವಹಿಸಿದ ಕೆ,ಎಸ್,ರಾಜಶೇಖರ್ ಅವರು ಮಾತನಾಡಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಸ್ವಸಹಾಯ ಸಂಘಗಳ ಮೂಲಕ ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಹಮ್ಮಿಕೊಂಡು ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದರು.ವೇದಿಕೆಯಲ್ಲಿ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ರಾಘವೇಂದ್ರ ಭಟ್ ಎಚ್ ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸೇವಾಪ್ರತಿನಿಧಿ ನಿರ್ಮಲ ಸ್ವಾಗತಿಸಿ ಸೇವಾ ಪ್ರತಿನಿಧಿ ಸುವರ್ಣ ವಂದಿಸಿದರು. ಮೇಲ್ವಿಚಾರಕರಾದ ಸುಧೀರ್ ಎನ್ .ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಸಾಂಪ್ರದಾಯಿಕ ಶೈಲಿಯಲ್ಲಿ ಪ್ರಸಾದ ವಿತರಣೆ ಮತ್ತು ಊಟದ ವ್ಯವಸ್ಥೆ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!