ಕುಶಾಲನಗರ, ನ 01:
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳೂರು ಗ್ರಾಮದಿಂದ ಮಾದಾಪಟ್ಟಣ ಗ್ರಾಮದ ಪಾಲಿಟೆಕ್ನಿಕ್ ಮೂಲಕ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ನೀರಾವರಿ ನಿಗಮದ ರಸ್ತೆಯು ಬೊಳ್ಳೂರು ಗ್ರಾಮದಲ್ಲಿ ನಡೆಯುತ್ತಿರುವ ಖಾಸಗಿ ಲೇಔಟ್ ಕಾಮಗಾರಿಯಿಂದಾಗಿ ಹದಗೆಟ್ಟಿದೆ.
ಲೇಔಟ್ ನಿರ್ಮಾಣಕ್ಕೆ ಅಗತ್ಯವಿರುವ ಜಲ್ಲಿ ಕಲ್ಲು ಹಾಗೂ ಎಂ-ಸ್ಯಾಂಡ್ ಅನ್ನು ಭಾರಿ ಗಾತ್ರದ ಟಿಪ್ಪರ್ ಲಾರಿಗಳ ಮೂಲಕ ಇವತ್ತು ಒಂದೇ ದಿನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾಗಿಸಿರುವುದರಿಂದ ರಸ್ತೆ ಸಂಪೂರ್ಣ ಹಾನಿಗೊಳಗಾಗಿದೆ
ಈ ಹಿಂದೆಯೂ ಭಾರಿ ವಾಹನಗಳ ಸಂಚಾರದಿಂದ ರಸ್ತೆ ಹಾನಿಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ನೀರಾವರಿ ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಪರಿಣಾಮ ಮತ್ತೆ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನೀರಾವರಿ ನಿಗಮ ಹಾಗೂ ಗುಡ್ಡೆಹೊಸೂರು ಗ್ರಾಪಂ ಅಧಿಕಾರಿಗಳು ಇತ್ತ ಗಮನಹರಿಸುವಂತೆ ಒತ್ತಾಯಿಸಿದ್ದಾರೆ.
Back to top button
error: Content is protected !!