ಕ್ರೈಂ

ಗೂಂಡಾ ಕಾಯ್ದೆಯಡಿ ವ್ಯಕ್ತಿ ಬಂಧನ: ಬಳ್ಳಾರಿಗೆ ಶಿಫ್ಟ್

ಕುಶಾಲನಗರ, ನ 06:
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕಬ್ಬೆ, ನಾಲಡಿ ಗ್ರಾಮದ ನಿವಾಸಿಯಾದ ಕೆ.ಸಿ.ಆಶೋಕ @ ಕುಡಿಯರ ಅಶೋಕ, (36 ವರ್ಷ) ಈತನು 2014 ನೇ ಸಾಲಿನಿಂದ ವಿವಿಧ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ಕನ್ನ, ಕಳವು ಹಾಗೂ ಸಾಮಾನ್ಯ ಕಳವು ಅಪರಾಧಗಳಲ್ಲಿ ಭಾಗಿಯಾಗಿದ್ದು, ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಸದರಿ ಪ್ರಕರಣಗಳು ಘನ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.

ಸದರಿ ಆರೋಪಿಯು ರೂಢಿಗತ ಅಪರಾಧಿಯಾಗಿದ್ದು, ಜಾಮೀನು ಪಡೆದು ಹೊರ ಬಂದ ನಂತರ ಪುನಃ ಅಕ್ರಮವಾಗಿ ಚಟುವಟಿಕೆಗಳು ಮತ್ತು ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕಳ್ಳಭಟ್ಟಿ ಸಾರಾಯಿ ವ್ಯವಹಾರಗಳ, ಮಾದಕ ವಸ್ತು ಅಪರಾಧಿಗಳು ಜೂಜುಕೋರರ, ಗೂಂಡಾಗಳ, ಆನೈತಿಕ ವ್ಯವಹಾರಗಳ ಅಪರಾಧ ಮತ್ತು ಕೊಳಚೆ ಪ್ರದೇಶಗಳನ್ನು ಕಬಳಿಸುವವರ ಮತ್ತು ವಿಡಿಯೋ ಅಥವಾ ಆಡಿಯೋ ಪೈರೇಟ್ಸ್ ಅಧಿನಿಯಮ ಅಡಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ ರವರು ದಿನಾಂಕ: 02-11-2026 ರಂದು ಆರೋಪಿ ಕೆ.ಸಿ.ಆಶೋಕ @ ಕುಡಿಯರ ಆಶೋಕ, 36 ವರ್ಷ ಈತನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಗೃಹದಲ್ಲಿ ಬಂಧನದಲ್ಲಿಡುವಂತೆ ಆದೇಶಿಸಲಾಗಿರುತ್ತದೆ.

ಮಾನ್ಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು, ಕೊಡಗು ಜಿಲ್ಲೆ, ಮಡಿಕೇರಿ ರವರ ಬಂಧನದ ಆದೇಶದ ಅನ್ವಯ ಆರೋಪಿ ಕೆ.ಸಿ.ಆಶೋಕನನ್ನು ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಗೃಹಕ್ಕೆ ಒಪ್ಪಿಸಲಾಗಿರುತ್ತದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!