ಕುಶಾಲನಗರ, ನ 14: ಮನೆಯ ಮಹಡಿಯಿಂದ ಜಾರಿ ಬಿದ್ದ ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪ ಮಾನಸಪೊನ್ನಪ್ಪ ಲೇಔಟ್ ನಲ್ಲಿ ನಡೆದಿದೆ.
ಕೊಪ್ಪ ಗ್ರಾಮದ ಕಟ್ಟಡ ಗುತ್ತಿಗೆದಾರ ಅರುಣ್ ಎಂಬವರ ಪುತ್ರ ಮಡಿಕೇರಿ ನವೋದಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿರಂತ್ (11) ಮೃತ ದುರ್ದೈವಿ. ರಜೆ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದ ಸಂದರ್ಭ ಶುಕ್ರವಾರ ನಡೆದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಶನಿವಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
Back to top button
error: Content is protected !!