
ಕುಶಾಲನಗರ, ನ 17:
ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ಹಾಗೂ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದೊಂದಿಗೆ ಕುಶಾಲನಗರ ವಾತ್ಸಲ್ಯ ಶಿಶುಪಾಲನಾ ಕೇಂದ್ರ ಹಾಗೂ ಅಂಗನವಾಡಿಗಳ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀದೇವಿ ಬಿ.ಮುಧೋಳ
ಮಕ್ಕಳಿಗೆ ಗೌರವ, ಪ್ರೀತಿ ಮತ್ತು ಆದರ ತೋರಿಸುವುದು ನಮ್ಮೆಲ್ಲೆರ ಕರ್ತವ್ಯ. ಮಹಿಳೆಯರು ಮತ್ತು ಮಕ್ಕಳಿಗೆ ಇಲಾಖೆಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.
ಎಲ್ಲರೂ ಹೊಂದಾಣಿಕೆಯಿಂದ ಮಕ್ಕಳ ಅಭ್ಯುದಯಕ್ಕೆ ಶ್ರಮಿಸಬೇಕಿದೆ
ಮಕ್ಕಳು ಬಾಲ್ಯದಲ್ಲೇ ಸದೃಢವಾಗಿದ್ದಲ್ಲಿ ಭವ್ಯ ಭವಿಷ್ಯ ರೂಪಿಸಿಕೊಳ್ಳಬಹುದು. ಮಕ್ಕಳ ಅಗತ್ಯ ಪೋಷಣೆ ಪಾಲನೆಗೆ ಇಲಾಖೆ ಕಾಳಜಿ ವಹಿಸಿದ್ದು
ಅಂಗನವಾಡಿ ಶಿಕ್ಷಕರು ಇಲಾಖೆ ಸೇವೆಯನ್ನು ಮಹಿಳೆಯರು ಮತ್ತು ಮಕ್ಕಳಿಗೆ ಸಮರ್ಪಕವಾಗಿ ಒದಗಿಸಲು ಬದ್ದರಾಗಿದ್ದಾರೆ ಎಂದರು.
ಸ್ತ್ರೀ ಶಕ್ತಿ ಒಕ್ಕೂಟದ
ರಾಜ್ಯ ಅಧ್ಯಕ್ಷೆ
ರೆಹನಾ ಸುಲ್ತಾನ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ವೇದಿಕೆಗಳು ಸಹಕಾರಿಯಾಗಲಿದೆ. ಮಾತ್ರವಲ್ಲದೆ ಮಕ್ಕಳಲ್ಲಿ ದೇಶಪ್ರೇಮ, ಬಾಂಧವ್ಯ ಹಾಗೂ ಆತ್ಮಸ್ಥೈರ್ಯ ಉಂಟುಮಾಡುವಲ್ಲಿ ಇಲಾಖೆ ಮೂಲಕ ಪ್ರತಿ ವರ್ಷ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.
ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು. ಶಿಶುಪಾಲನಾ ಕೇಂದ್ರದ ವಿದ್ಯಾರ್ಥಿನಿ ರಿಷಿಕಾ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಹೆಚ್.ಎಂ.
ಹೇಮ, ಉಪಾಧ್ಯಕ್ಷೆ ಯಶೋಧ, ಮಡಿಕೇರಿ ತಾಲೂಕು ಕಾರ್ಯದರ್ಶಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕು ಮೇಕ್ವಿಚಾರಕಿ ಸಾವಿತ್ರಮ್ಮ ಸೇರಿದಂತೆ ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ವಾತ್ಸಲ್ಯ ಶಿಶುಪಾಲನಾ ಕೇಂದ್ರದ ಶಿಕ್ಷಕಿ ರಂಜಿತಾ, ಸಿಬ್ಬಂದಿಗಳಾದ ಅಭಿಲಾಷ, ಗ್ರೀಷ್ಮಾ ಸೇರಿದಂತೆ ಮಕ್ಕಳ ಪೋಷಕರು ಇದ್ದರು.
ಇದೇ ಸಂದರ್ಭ ಮಕ್ಕಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.
Back to top button
error: Content is protected !!