ಪೊಲೀಸ್

ಬಸವೇಶ್ವರರ ಕುರಿತು ಅವಹೇಳನ: ವ್ಯಕ್ತಿಯ ವಿರುದ್ಧ ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ಕುಶಾಲನಗರ : ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ಬಸವ ಮಂಟಪ ಕೃತಿಯಲ್ಲಿ ಅವಾಚ್ಯವಾಗಿ ನಿಂದಿಸಿರುವ ಕೃತಿಯ ಲೇಖಕರ ವಿರುದ್ದ ಸರ್ಕಾರ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಕುಶಾಲನಗರದ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಉಪಾಧ್ಯಕ್ಷ ಹೆಚ್.ಪಿ.ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಕೆ.ಪಿ.ಪರಮೇಶ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!