ಕಾರ್ಯಕ್ರಮ

ಮಾದಾಪಟ್ಟಣದಲ್ಲಿ ತಾಲೂಕು ಮಟ್ಟದ ಸಹಪಠ್ಯ‌ ಚಟುವಟಿಕೆಗಳ ಸ್ಪರ್ಧೆ

ಕುಶಾಲನಗರ, ನ 24: ಶಿಕ್ಷಕರು ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಕಲಿಕಾ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎ.ಸೌಮ್ಯಪೊನ್ನಪ್ಪ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ,ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ,ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಸಂಯುಕ್ತಾಶ್ರಯದಲ್ಲಿ ಮಾದಾಪಟ್ಟಣದ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ತಮ್ಮಲ್ಲಿರುವ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಸೃಜನಶೀಲ ಪ್ರತಿಭೆಗಳನ್ನು ಅಭಿವ್ಯಕ್ತ ಪಡಿಸಬೇಕು. ವೃತ್ತಿಪರ ಒತ್ತಡದಿಂದ ಹೊರಬಂದು ಉಲ್ಲಾಸದಿಂದ ಕಾರ್ಯನಿರ್ವಹಿಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದರು.

ಶಿಕ್ಷಕರು ಪಾಠ ಬೋಧನೆಯ ಜತೆಗೆ ಸಹ ಪಠ್ಯ ಚಟುವಟಿಕೆಗಳ ಮೂಲಕ ಆಸಕ್ತಿಯಿಂದ ಮಕ್ಕಳಿಗೆ ಪಾಠ ಮಾಡಬೇಕಿದೆ. ಇದರಿಂದ ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸಲು ಸಾಧ್ಯ. ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷ ಸೂಫಿ ಪೆರಾಜೆ ಮಾತನಾಡಿ,ಶಿಕ್ಷಕರ ದೈನಂದಿನ ಬೋಧನಾ ಒತ್ತಡವನ್ನು ನಿವಾರಿಸಿ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದರು.

ತಾಲ್ಲೂಕು ಶಿಕ್ಷಣ ಸಂಯೋಜಕಿ ಯದುಕುಮಾರಿ ಮಾತನಾಡಿ,
ಶಿಕ್ಷಕರಲ್ಲಿನ ವಿವಿಧ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂಬುದಾಗಿ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್, ತಾಲ್ಲೂಕು ಅಧ್ಯಕ್ಷ ಎಚ್.ಎನ್.ಮಂಜುನಾಥ್, ಪ್ರಧಾನ‌ ಕಾರ್ಯ ಟಿ.ಕೆ.ಬಸವರಾಜು,ನಿರ್ದೇಶಕರಾದ ರಾಜಪ್ಪ,ಉಮಾದೇವಿ,ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಂದ್ರ, ತಾಲ್ಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಮಾದಾಪಟ್ಟಣ ಪಿಎಂಶ್ರೀ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟಿ.ಎಸ್ ಶಶಿಕುಮಾರ್,
ನೋಡೆಲ್ ಅಧಿಕಾರಿ ಸತ್ಯನಾರಾಯಣ ಪ್ರಮುಖರಾದ
ವಸಂತಕುಮಾರ್,ವಿಶ್ವನಾಥ್, ಶಿವಲಿಂಗ,ಹರೀಶ್ ಮತ್ತಿತರರು ಪಾಲ್ಗೊಂಡಿದ್ದರು.ತೀರ್ಪುಗಾರರಾಗಿ ಉ.ರಾ.ನಾಗೇಶ್, ಶಂಕರಯ್ಯ,ಪೂರ್ಣಿಮಾ, ವೈಶಾಲಿ,ದಿನೇಶ್ ಕಾರ್ಯನಿರ್ವಹಿಸಿದರು.

ಜಾನಪದ ಗೀತೆ,ಪ್ರಬಂಧ ಸ್ಪರ್ಧೆ, ಆಶುಭಾಷಣ,ರಸಪ್ತಶ್ನೆ,ಚಿತ್ರಕಲೆ,ಪೀಠೋಪಕರಣ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಶಿಕ್ಷಕರು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಣೆ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!