ಚುನಾವಣೆ

ಟಿಕೆಟ್ ಆಕಾಂಕ್ಷಿಗಳು ಹಲವರಿರಬಹುದು, ಗೆಲ್ಲಬೇಕಿರುವುದು ಬಿಜೆಪಿ! ಕೂಡಿಗೆಯಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಭಾಸ್ಕರ್ ನಾಯಕ್ ಕರೆ

ಕೂಡಿಗೆ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೂಡಿಗೆ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳು ಯಾರೇ ಇರಲಿ, ಬಿಜೆಪಿ ಅಭ್ಯರ್ಥಿಯ ಗೆಲುವೇ ನಮ್ಮ ಏಕೈಕ ಗುರಿಯಾಗಬೇಕು. ವ್ಯಕ್ತಿಗಿಂತ ಪಕ್ಷ ದೊಡ್ಡದು, ವೈಯಕ್ತಿಕ ಆಸೆಗಿಂತ ಸಂಘಟನೆಯ ಹಿತ ದೊಡ್ಡದು. ಈ ಬಾರಿ ಕೂಡಿಗೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪದೊಂದಿಗೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಚುನಾವಣಾ ಕಣಕ್ಕೆ ಸಜ್ಜಾಗಬೇಕು ಎಂದು ಬಿಜೆಪಿ ಮುಖಂಡ ಭಾಸ್ಕರ್ ನಾಯಕ್ ಕರೆ ನೀಡಿದ್ದಾರೆ.

ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟ ವಿಚಾರ. ಆದರೆ ಅಭ್ಯರ್ಥಿ ಯಾರೇ ಆಗಿರಲಿ, ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ. ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಪಕ್ಷದ ವಿರುದ್ಧ ಕೆಲಸ ಮಾಡುವುದು ಅಥವಾ ಸಂಘಟನೆಯ ಶಕ್ತಿಯನ್ನು ದುರ್ಬಲಗೊಳಿಸುವುದು ಸರಿಯಾದ ನಡೆ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೂಡಿಗೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಧ್ವಜ ಹಾರಿಸುವುದು ನಮ್ಮ ಗುರಿ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಬೂತ್ ಮಟ್ಟದಿಂದ ಸಂಘಟನೆಯನ್ನು ಬಲಪಡಿಸಬೇಕು. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಪ್ರತಿಯೊಬ್ಬ ಕಾರ್ಯಕರ್ತರೂ ಮೈದಾನಕ್ಕಿಳಿದು ಪಕ್ಷದ ಗೆಲುವಿಗೆ ಶ್ರಮಿಸಬೇಕು.

ಆಕಾಂಕ್ಷಿಗಳು ಎಷ್ಟೇ ಇರಲಿ, ಅಭ್ಯರ್ಥಿ ಯಾರೇ ಆಗಿರಲಿ, ನಮ್ಮ ನಿಷ್ಠೆ ಬಿಜೆಪಿಗೆ, ನಮ್ಮ ಗುರಿ ಬಿಜೆಪಿಯ ಗೆಲುವಿಗೆ, ನಮ್ಮ ಸಂಕಲ್ಪ ಕೂಡಿಗೆಯಲ್ಲಿ ಮತ್ತೊಮ್ಮೆ ಕಮಲ ಅರಳಿಸುವುದಕ್ಕೆ ಇರಬೇಕು. ಈ ಬಾರಿ ಕೂಡಿಗೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ಕಾರ್ಯಕರ್ತರು ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಭಾಸ್ಕರ್ ನಾಯಕ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!