ಕಾರ್ಯಕ್ರಮ
ವಿಶ್ವಕರ್ಮ ಜಯಂತಿ ಮತ್ತು ಅಸಂಘಟಿತ ಕಾರ್ಮಿಕರಿಗೆ ಕಾರ್ಡ್ ಹಾಗೂ ರಕ್ಷಣಾ ಕಿಟ್ ವಿತರಣೆ
ಕುಶಾಲನಗರ, ಸೆ 18: ದೇಶದ ನಿರ್ಮಾಣ ಕಾರ್ಯದಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಮಹತ್ತರವಾದದ್ದು, ಕಾರ್ಮಿಕರ ಹಿತದೃಷ್ಟಿಯಿಂದ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೈ ಮುಲ್ ನಿರ್ದೇಶಕ ಪಿ. ಎಂ. ಪ್ರಸನ್ನ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ ಎಸ್ ಎಲ್ ವಿ ಕಲ್ಯಾಣ ಮಂಟಪದಲ್ಲಿ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಪಿರಿಯಾಪಟ್ಟಣ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಮತ್ತು ಅಸಂಘಟಿತ ಕಾರ್ಮಿಕರಿಗೆ ಕಾರ್ಡ್ ವಿತರಣೆ ಹಾಗೂ ಪ್ರತಿ ರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಿರಿಯಾಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಕೆ. ಕೆ. ಶಶಿ ರವರು ಮಾತನಾಡಿ,ಮಹಿಳಾ ಕಾರ್ಮಿಕರಿಗೆ 15 ಸಾವಿರವರೆಗೆ ಹೆರಿಗೆ ಭತ್ಯೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಧನ ಸಹಾಯ, ಅನಾರೋಗ್ಯ ಪೀಡಿತರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ನೆರವು, ದೈಹಿಕ ಅಂಕವಿಕಲತೆ ಉಂಟಾದರೆ ಸಹಾಯ ಧನ, ಹೀಗೆ ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಇವುಗಳನ್ನು ಸದುಪ ಯೋಗ ಪಡಿಸಿಕೊಂಡು ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ವಿಮಾ ಸೌಲಭ್ಯವನ್ನು ಪಡೆಯಬೇಕು ಎಂದು ಹೇಳಿದರು.
ಕಟ್ಟಡ ಕಾರ್ಮಿಕ ಮಕ್ಕಳಿಗೆ ಹೆಚ್ಚು ಹಂಕ ಪಡೆದಿದ್ದರಿಂದ ಸುಮಾರು 20 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರದ ಜೊತೆಗೆ ಸನ್ಮಾನಿಸಿ, ಅಸಂಘಟಿತ ಕಾರ್ಮಿಕರಿಗೆ ಕಾರ್ಡ್ ವಿತರಣೆ ಮಾಡಿ, ಸುಮಾರು 150 ಫಲಾನುಭವಿಗಳಿಗೆ ಪ್ರತಿ ರಕ್ಷಣಾ ಕಿಟ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಕಾರ್ಯದಕ್ಷ ಎಸ್.ಎನ್. ವಾಸುದೇವ್, ಪಿರಿಯಾಪಟ್ಟಣ ವೃತ್ತ ಕಾರ್ಮಿಕ ನಿರೀಕ್ಷಕ ಆರ್. ರವಿ, ಪಿರಿಯಾಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಶಶಿ, ಪ್ರಧಾನ ಕಾರ್ಯದರ್ಶಿ ಮನು ಕುಮಾರ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಶಬ್ಬೀರ್ ಖಾನ್, ಉಪಾಧ್ಯಕ್ಷ ಪ್ರಸನ್ನ, ಕಾರ್ಯದರ್ಶಿ ಸಂತೋಷ್, ಖಜಾಂಜಿ ರಾಜೇಶ್, ಪದಾಧಿಕಾರಿಗಳು, ಬೈಲುಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬೋರೇಗೌಡ , ಅವತ್ತಿ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ , ಕಟ್ಟಡ ಕಾರ್ಮಿಕರು, ಸಾರ್ವಜನಿಕರು,ವಿದ್ಯಾರ್ಥಿಗಳು, ಬೈಲಕುಪ್ಪೆ ಕ್ರೈಂ ಸಬ್ ಇನ್ಸ್ಪೆಕ್ಟರ್ ಮಹಾಲಿಂಗಯ್ಯ, ಸಿಬ್ಬಂದಿಗಳಾದ ಶಿವಣ್ಣ,ದೇವರಾಜು,