ಪ್ರಕಟಣೆ

ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ: ಡಾ.ಕೆ.ಕೆ.ಧರ್ಮಪ್ಪ ನೂತನ ಪ್ರಭಾರ ನಿರ್ದೇಶಕ

ಕುಶಾಲನಗರ, ಅ 02: ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕಅಳುವಾರ, ಇಲ್ಲಿಗೆ ನೂತನ ಪ್ರಭಾರ ನಿರ್ದೇಶಕರಾಗಿ ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಹ ಪ್ರಾಧ್ಯಾಪಕರಾದ ಡಾ. ಕೆ. ಕೆ. ಧರ್ಮಪ್ಪ ಅವರು ನೇಮಕಗೊಂಡಿದ್ದಾರೆ.ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಈಗಾಗಲೇ ಕೊಡಗು ವಿಶ್ವವಿದ್ಯಾನಿಲಯ ಘೋಷಣೆ ಮಾಡಿರುವುದು ಬಹಳ ಸಂತಸದಾಯಕ ಸುದ್ದಿ. ಒಂದು ವಿಶ್ವವಿದ್ಯಾನಿಲಯಕ್ಕೆ ಬೇಕಾಗುವ ಬಹುತೇಕ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನಮ್ಮ ಸಂಸ್ಥೆಯು ಹೊಂದಿದೆ. ಮಂಗಳೂರು ವಿಶ್ವವಿದ್ಯಾನಿಲಯವು ಗ್ರಾಮೀಣ ಪ್ರದೇಶದ ಪ್ರತಿ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ತಲುಪಿಸಬೇಕೆಂಬ ಮಹದಾಸೆಯಿಂದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರವನ್ನು ತೆರೆದು ಹಲವಾರು ಕೋರ್ಸ್‌ಗಳನ್ನು ಪ್ರಾರಂಭಿಸಿದೆ. ನಮ್ಮ ಸಂಸ್ಥೆಯಲ್ಲಿ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಂಡು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಡಗು ಮತ್ತು ಸುತ್ತಮುತ್ತಲಿನ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಬರುವಂತೆ ಮತ್ತು ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!
WhatsApp us