ಕಾರ್ಯಕ್ರಮ
ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರಕ್ಕೆ ಶಾಸಕ ಅಪ್ಪಚ್ಚುರಂಜನ್ ಚಾಲನೆ


ಕುಶಾಲನಗರ, ಅ 09: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ 3 ನೇ ಸಾಕಾನೆ ಶಿಬಿರ ಶನಿವಾರ ಲೋಕಾರ್ಪಣೆಗೊಂಡಿತು.ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಿದರು. ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಆಹಾರ ತಿನ್ನಿಸಲಾಯಿತು. ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಶಿಬಿರದಲ್ಲಿ ಗಿಡಗಳನ್ನು ನೆಡಲಾಯಿತು.