ಕುಶಾಲನಗರ, ಅ 11: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಬ್ಬಿನಗದ್ದೆ ಮತ್ತು ಮಾವಿನಹಳ್ಳ ಗ್ರಾಮದಲ್ಲಿ ಗಿರಿಜನ ಅಭಿವೃದ್ಧಿ ಯೋಜನೆಯಡಿ 32 ಲಕ್ಷ ರೂ ವೆಚ್ಚದಲ್ಲಿ 4 ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅಪ್ಪಚ್ಚುರಂಜನ್ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯರಾದ ರಕ್ಷಿತ್, ಗಿರಿಜಮ್ಮ, ಬಸವನಹಳ್ಳಿ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷ ಚಂದ್ರು, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ. ವಿ. ಶಿವರಾಮ್, ನಿರ್ಮಿತಿ ಕೇಂದ್ರದ ಅಭಿಯಂತರ ಸಚಿತ್, ಗುತ್ತಿಗೆದಾರ ಪವನ್ ಶಾಸಕರ ಆಪ್ತ ಕಾರ್ಯದರ್ಶಿ ರವಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!