ಕುಶಾಲನಗರ, ಅ 15: ಮುಳ್ಳುಸೋಗೆ ಗ್ರಾಮ ಪಂಚಾಯಿತಿ 2021- 22 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಕೆ.ಚೆಲುವರಾಜು ವಹಿಸಿದ್ದರು. ನೋಡಲ್ ಅಧಿಕಾರಿಯಾಗಿ ಶಿಕ್ಷಣ ಸಂಯೋಜಕರಾದ ಶೇಖರ್ ಹಾಗೂ ಉಪಾಧ್ಯಕ್ಷೆ ಹಾಗೂ ಅಭಿವೃದ್ಧಿ ಅಧಿಕಾರಿ ಸುಮೇಶ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 2021 22ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಜಮಾ ಬಂದಿ ವರದಿಯನ್ನು ಕಾರ್ಯದರ್ಶಿ ಮಂಜುನಾಥ ವಾಚಿಸಿದರು. ಗ್ರಾಮ ಪಂಚಾಯತಿ ಸದಸ್ಯರಾದ ಹರಣಿ ಪ್ರಭಾಕರ್ ರವರು ಪ್ರಾರ್ಥಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಸ್ವಾಗತಿಸಿದರು.
Back to top button
error: Content is protected !!