ಪ್ರತಿಭಟನೆ

ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ

ಕುಶಾಲನಗರ, ಅ 16: ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ನವೆಂಬರ್ ತಿಂಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷರಾದ ಆರ್. ಮೋಹನ್ ತಿಳಿಸಿದ್ದಾರೆ.

ಅವರು, ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈ ಸಂದರ್ಭ ಪಟ್ಟಣದ ಕೆಲವು ಆಟೋ ನಿಲುಗಡೆ ತಾಣಗಳಲ್ಲಿ ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ವರ್ಷ ಸಂಘದ ನಿರ್ಣಯದಂತೆ ಕುಶಾಲನಗರದಲ್ಲಿ ಸಂಘದ ಆಶ್ರಯದಲ್ಲಿ ಮಾತ್ರ ನಡೆಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ದಾನಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೋರಿದ್ದಾರೆ.
ಸಂಘದ ಕಾರ್ಯದರ್ಶಿ ಮಂಜು ಬೆಳ್ಳುಳ್ಳಿ ಮಾತನಾಡಿ, ಪಟ್ಟಣದ ಎಲ್ಲಾ ಆಟೋ ಚಾಲಕರು ಸಂಘದ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಬೇಕು. ಪ್ರತ್ಯೇಕವಾಗಿ ನಡೆಸುವ ಆಟೋ ನಿಲ್ದಾಣಗಳ ಕಾರ್ಯಕ್ರಮ ಕೈಬಿಡಬೇಕು ಎಂದು ಕೋರಿದ್ದಾರೆ.
ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ದೇವರಾಜ್(ಜವರ), ಗೌರವ ಅಧ್ಯಕ್ಷರಾದ ಕೆ.ಟಿ ಯೋಗೇಶ್, ಎಂ. ಮಹೇಶ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!