ಪ್ರಕಟಣೆ

ಕೋಟಿಕಂಠ ಗಾಯನ: 28 ರಂದು ಎರಡು ಸಾವಿರ ಮಂದಿಯಿಂದ ಗಾಯನ

ಕುಶಾಲನಗರ, ಅ 26:-ಕೋಟಿ ಕಂಠ ಗಾಯನ ಕಾರ್ಯಕ್ರಮದ ಅಂಗವಾಗಿ ಆ 28ರ ಶುಕ್ರವಾರ ಎರಡು ಸಾವಿರ ಮಂದಿಯಿಂದ ಗಾಯನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್ ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ,ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅಂದು ಬೆ 10.30ಕ್ಕೆ ಪಟ್ಟಣದ ಖಾಸಗಿ ಬಸ್ಸು ನಿಲ್ದಾಣದಲ್ಲಿ ಕನ್ನಡಕ್ಕಾಗಿ ನಾವು,ಮಾತಾಡ್ ಮಾತಾಡ್ ಕನ್ನಡ,ನನ್ನ ನಾಡು ನನ್ನ ಹಾಡು,ಕನ್ನಡ ರಾಜ್ಯೋತ್ಸವ ಕೋಟಿ ಕಂಠ ಗಾಯನ ಅಭಿಯಾನದ ಅಂಗವಾಗಿ ಎರೆಡು ಸಾವಿರ ಮಂದಿ ಗಾಯನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯಾದ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೋಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಕುವೆಂಪು ಅವರು ಬರೆದಿರುವ ‘ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್.ಕರ್ಕಿ ಅವರು ಬರೆದಿರುವ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ.ಚೆನ್ನವೀರ ಕಣವಿ ಅವರು ಬರೆದಿರುವ ‘ವಿಶ್ವ ವಿನೂತನ ವಿದ್ಯಾಚೇತನ’, ಡಾ.ಹಂಸಲೇಖ ಅವರು ಬರೆದಿರುವ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಹಾಡುಗಳನ್ನು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹಿನ್ನೆಲೆ ಸಂಗೀತದೊಂದಿಗೆ ಸಾಮೂಹಿಕವಾಗಿ ಹಾಡಿ ಕನ್ನಡಾಭಿಮಾನವನ್ನು ಮೆರೆದು, ಈ ಅಭಿಯಾನವನ್ನು ಯಶಸ್ವಿಗೊಳಿಸಲು ಬನ್ನಿ ಕನ್ನಡಿಗರಾದ ನಾವೆಲ್ಲರೂ ಈ ಅಭಿಮಾನ ಈ ಅಭಿಯಾನದಲ್ಲಿ ಪಾಲ್ಗೊಳ್ಳೋಣ ಎಂದು ಮಹೇಶ್ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!