ಕುಶಾಲನಗರ, ನ 02: ಕುಶಾಲನಗರ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಚ ಸರ್ವೇಕ್ಷಣ್ 2023 ರ ಯೋಜನೆಗೆ ಚಾಲನೆ ನೀಡಲಾಯಿತು. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವುದರೊಂದಿಗೆ ಕಸ ಬೇರ್ಪಡಿಸುವಿಕೆ ಮಾರ್ಗಸೂಚಿಗಳನ್ನು ಜನರಿಗೆ ಅರಿವು ಮೂಡಿಸುವ ಸಂಬಂಧ ಕರಪತ್ರಗಳನ್ನು ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿ ಸಿಬ್ಬಂದಿಗಳು ಬಿಡುಗಡೆಗೊಳಿಸಿದರು.
ಈ ಸಂಬಂಧ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಸಾಗುವ ವಾಹನಕ್ಕೆ ಚಾಲನೆ ನೀಡಲಾಯಿತು.
ಅಡುಗೆ ಮನೆ ಕಸ, ತೋಟದ ಕಸ, ಪ್ಲಾಸ್ಟಿಕ್, ಕಾಗದ, ಲೋಹ ಮತ್ತಿತರ ವಸ್ತುಗಳನ್ನು ಪ್ರತ್ಯೇಕವಾಗಿ ಬೇರ್ಪಡಿಸುವ ಬಗ್ಗೆ ನಾಗರೀಕರಿಗೆ ಅರಿವು ಮೂಡಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಉದಯ ಕುಮಾರ್ ತಿಳಿಸಿದರು.
ಪ್ರತಿ ಭಾನುವಾರ ಮತ್ತು ಗುರುವಾರ ಒಣಕಸ ಮಾತ್ರ ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಮಾತ್ರ ಪಟ್ಟಣ ಪಂಚಾಯಿತಿ ವಾಹನಗಳಿಗೆ ನೀಡುವುದು. ಬೇರ್ಪಡಿಸದೆ ನೀಡುವ ಕಸವನ್ನು ಸ್ವೀಕರಿಸಲಾಗುವುದಿಲ್ಲ ಎಂದು ತಿಳಿಸಿರುವ ಉದಯಕುಮಾರ್, ನಿಯಮ ಪಾಲಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
Back to top button
error: Content is protected !!