ಕುಶಾಲನಗರ, ನ 10:
ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯ ಮಂತ್ರಿಗಳ ಅಮೃತ್ ನಗರೋತ್ಥಾನ(ಮುನಿಸಿಪಾಲಿಟಿ)ಯೋಜನೆಯಡಿ ರೂ.5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.
ಪಟ್ಟಣದ
4ನೇ ಬ್ಲಾಕ್ ನ ಪಟೇಲ್ ಮತ್ತು ವೆಂಕಟೇಶ್ವರ ಬಡಾವಣೆಯಲ್ಲಿ ರೂ.20 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿರುವ ನೂತನ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರೋತ್ಥಾನ ಯೋಜನೆ ಎಲ್ಲಾ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು,ಸದ್ಯದಲ್ಲಿಯೇ ಕಾಮಗಾರಿಗಳನ್ನು ಆರಂಭಿಸಲಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಬೆಳಕು ಯೋಜನೆಯಡಿ ಕುಗ್ರಾಮದ ಪ್ರತಿ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.ಅದೇ ರೀತಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಮೃತ್ ಯೋಜನೆಯಡಿ ನಲ್ಲಿ ಕಲ್ಪಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ಸುಧಾರಣೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ಕ್ಯಾನ್ಸರ್ ಮಾರಕವಾದ ತಂಬಾಕು ಬ್ಯಾನ್ ಮಾಡಲು ಚಿಂತನೆ ನಡೆಸಲಾಗಿದೆ.ಜೊತೆಗೆ ಧೂಮಪಾನ ನಿಷೇಧಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜೈವರ್ಧನ್ ಮಾತನಾಡಿ, ತೀವ್ರ ಹದಗೆಟ್ಟಿದ್ದ ಪಟೇಲ್ ಬಡಾವಣೆ ರಸ್ತೆ ಅಭಿವೃದ್ಧಿ ಶಾಸಕರಿಗೆ ಮನವಿ ಮಾಡಿದ ಮೇರೆಗೆ ಶಾಸಕರ ಅನುದಾನದಿಂದ ರೂ. 20 ಲಕ್ಷ ಒದಗಿಸಿ ಉತ್ತಮ ರಸ್ತೆ ನಿರ್ಮಾಣಕ್ಕೆ ಕಾರಣರಾಗಿದ್ದು,ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸುರಯ್ಯಬಾನು, ಸದಸ್ಯ ಸುರೇಶ್,ಸಬ್ ರಿಜಿಸ್ಟರ್ ಅನಿತಾ ,ಗುತ್ತಿಗೆದಾರ ಸಿ.ರಕ್ಷಿತ್ ಹಾಗೂ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Back to top button
error: Content is protected !!