ಕುಶಾಲನಗರ, ನ 10: ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಕನಕದಾಸ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆಯಿಂದ ಕುಶಾಲನಗರ ತಾಲೂಕಿನ ಪ್ರತಿಭಾನ್ವಿತ ಪಿಯು ಮತ್ತು ಎಸ್ಸೆಸೆಲ್ಸಿ ವ್ಯಾಸಂಗ ಮಾಡುತ್ತಿರುವ ಗಿರಿಜನ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಿಕ್ಷನರಿ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷರಾದ ಪ್ರಭಾಕರ್ ತಿಳಿಸಿದ್ದಾರೆ.
ನಾಡಿನ ಸಮಸ್ತ ಜನರಿಗೆ ಕನಕದಾಸ ಜಯಂತಿ ಶುಭಾಶಯ ತಿಳಿಸಿರುವ ಪ್ರಭಾಕರ್ ಅವರು, ಶುಕ್ರವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಈ ಮೂಲಕ ಮನವಿ ಮಾಡಿದ್ದಾರೆ.
Back to top button
error: Content is protected !!