ಕುಶಾಲನಗರ, ನ 15: ವಿದ್ಯಾರ್ಜನೆ ಸಂದರ್ಭ ಮಾನವೀಯ ಮೌಲ್ಯಗಳನ್ನು ಕೂಡ ಅಳವಡಿಸಿಕೊಂಡಲ್ಲಿ ಬದುಕಿನ ಮೌಲ್ಯ ಹೆಚ್ಚಲಿದೆ ಎಂದು ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಹೆಚ್.ವಿ. ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕೂಡಿಗೆ ಪದವಿ ಪೂರ್ವ ಕಾಲೇಜಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ
ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ನಡೆದ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಮಾತನಾಡಿದರು.
ಕಾರ್ಯಕ್ರಮದಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಪ್ರಾಂಶುಪಾಲ ಕೆ.ಬಿ. ಬಸಪ್ಪ, ಮಡಿಕೇರಿ ಲಯನ್ಸ್ ಕ್ಲಬ್ ಟ್ರಸ್ಟ್ ನ ಲಯನ್ ನವೀನ್ ಅಂಬೇಕಲ್, ತಾಲ್ಲೂಕು ಸಂಚಾಲಕ ದೀಪಕ್, ತಾಲ್ಲೂಕು ಕಾಂಗ್ರೆಸ್ ಉಪಾಧ್ಯಕ್ಷ ಅಣ್ಣಯ್ಯ, ಪ್ರಮುಖರಾದ ಗೋವಿಂದ, ರಾಮಯ್ಯ ಸೇರಿದಂತೆ ಎಲ್ಲಾ ಉಪನ್ಯಾಸಕ ವೃಂದ, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.
Back to top button
error: Content is protected !!