ಕ್ರೀಡೆ

ವಿಟಿಯು ಅಂತರ ಕಾಲೇಜುಗಳ ವಲಯಮಟ್ಟದ ಬಾಲಕಿಯರ ಕಬಡ್ಡಿ ಟೂರ್ನಿ

ಕುಶಾಲನಗರ, ನ 28
ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ
ಸೋಮವಾರ ಆರಂಭಗೊಂಡ
2022-23ನೇ ಸಾಲಿನ ವಿಟಿಯು ಅಂತರ ಕಾಲೇಜುಗಳ ವಲಯಮಟ್ಟದ ಬಾಲಕಿಯರ
ಕಬಡ್ಡಿ ಟೂರ್ನಿಯನ್ನು
ಶಾಸಕ ಎಂ.ಪಿ.ಅಪ್ಪಚ್ಚುರಂಜನ್
ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್,
ತಾಂತ್ರಿಕ ಕೋರ್ಸ್ ನ ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ಕಬಡ್ಡಿ ಸೇರಿದಂತೆ ಇನ್ನಿತರ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ
ತಮ್ಮಲ್ಲಿ ಕ್ರೀಡಾ ಸ್ಫೂರ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಪುರಾತನವಾದ
ಕಬಡ್ಡಿ ಆಟವು
ಭಾರತದ ಗ್ರಾಮೀಣ ಕ್ರೀಡೆ ಆಗಿದೆ. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆಯನ್ನು ಜೊತೆಗೆ ಹೆಸರನ್ನೂ ತಂದು ಕೊಟ್ಟಿದೆ ಎಂದರು.
ಈ ಎಂಜಿನಿಯರಿಂಗ್ ಕಾಲೇಜಿನ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಶಾಸಕ ರಂಜನ್ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ ಸೀನಪ್ಪ ಮಾತನಾಡಿ,
ಇಂತಹ ಟೂರ್ನಿಗಳು
ವಿದ್ಯಾರ್ಥಿಗಳಲ್ಲಿ ಪರಸ್ಪರ ಪ್ರೀತಿ, ಸ್ನೇಹಪರತೆ ಬೆಳೆಸುವದರೊಂದಿಗೆ ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು. ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಬಿ.ಜೈವರ್ಧನ್, ಡಿವೈಎಸ್ಪಿ ಗಂಗಾಧರ್ , ಜಿಲ್ಲಾ ಯುವಜನ ಸೇವೆ , ಕ್ರೀಡೆ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯ,ಸರ್ಕಾರಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಎಚ್.ವಿ.ಶಿವಪ್ಪ, ಸ್ಥಳೀಯ ಮುಖಂಡರಾದ ವಿ.ಎನ್.ವಸಂತಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರಸಾದ್ ಸಾಲ್ಯಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಉಪನ್ಯಾಸಕರು, ಇತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!