ಕುಶಾಲನಗರ, ಡಿ 02: ಉತ್ತರ ಕೊಡಗಿನ ಕೊಡ್ಲಿಪೇಟೆ ಗ್ರಾಮದಲ್ಲಿರುವ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ವತಿಯಿಂದ ಸಂಸ್ಥೆಯ ಆವರಣದಲ್ಲಿ ಕಲಾ ಸಂಭ್ರಮ 2022 ಕಾರ್ಯಕ್ರಮವನ್ನು ಇದೇ ತಿಂಗಳ ದಿನಾಂಕ ನವೆಂಬರ್ 9 ರಂದು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆದ ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ, ವಿದ್ಯಾಸಂಸ್ಥೆಯ ಪ್ರೌಢ ಶಾಲೆ, ಪಿಯುಸಿ ಹಾಗು ಪದವಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ವಿದ್ಯಾಸಂಸ್ಥೆಯ ಗೌರವ ಅಧ್ಯಕ್ಷ ಎಸ್.ಎಸ್.ನಾಗರಾಜು ಅಧ್ಯಕ್ಷತೆಯಲ್ಲಿ ಜರುಗಲಿವೆ.
ಹಾಗೆಯೇ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್.ಎಸ್.ಚಂದ್ರಮೌಳಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಲಾ ಸಂಭ್ರಮದ ವೇದಿಕೆಯಲ್ಲಿ ರಾಜ್ಯ ಉಚ್ಛನ್ಯಾಯಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕುಮಾಲ್, ಬೆಂಗಳೂರು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಇಶ್ರತ್ ಜಹಾನ್ ಅರಾ ಹಾಗು ಕ್ಯಾಲಿಪೋರ್ನಿಯಾದ ಬಯೋ ಮೆಡಿಕಲ್ ಇಂಜಿನಿಯರ್ ಎಸ್.ಉಮಾಶಂಕರ್ ಅವರನ್ನು ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು.
ಇದೇ ಸಂದರ್ಭ ವೇದಿಕೆಯಲ್ಲಿ ರಾಜ್ಯ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್,
ಪತ್ರಿಕೋದ್ಯಮಿ ವಿಶ್ವೇಶ್ವರ ಭಟ್,
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಮನುಬಳಿಗಾರ್, ಚಲನ ಚಿತ್ರ ನಿರ್ದೇಶಕ ಟಿ.ಎನ್.ಸೀತಾರಾಂ, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ, ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ಚಲನ ಚಿತ್ರ ನಿರ್ದೇಶಕ ಲಿಂಗದೇವರು, ರಂಗಕರ್ಮಿ ಕಪ್ಪಣ್ಣ, ನಟ ಮಂಡ್ಯ ರಮೇಶ್ ಇರಲಿದ್ದಾರೆ.
ಹಾಗೆಯೇ ಸಂಜೆ ಖ್ಯಾತ ವಾಗ್ಮಿ ಪ್ರೊ.ಕೃಷ್ಣೇಗೌಡ ಅವರಿಂದ ರಸ ಸಂಜೆ ಮತ್ತು ಡಾ. ಮೃತ್ಯುಂಜಯ ದೊಡ್ಡವಾಡ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಚಂದ್ರಮೌಳಿ ತಿಳಿಸಿದ್ದಾರೆ.
Back to top button
error: Content is protected !!