ಕುಶಾಲನಗರ, ಡಿ 09: ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ರೂ.6 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಮತ್ತು ಕಂಪ್ಯೂಟರ್ ಉಪಕರಣಗಳಿಗೆ ಶಾಸಕ ಅಪ್ಪಚ್ಚುರಂಜನ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಬಿಜೆಪಿ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಕುಶಾಲನಗರ ಉತ್ತಮ ಎಜುಕೇಶನ್ ಹಬ್ ಆಗಿ ಅಭಿವೃದ್ದಿಯಾಗುತ್ತಿದೆ ಎಂದರು.
6 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್
10 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್, 11 ಟೇಬಲ್, ಚೇರ್, ಯುಪಿಎಸ್, ಬ್ಯಾಟರಿ, ಸ್ಕ್ರೀನ್ ಒಳಗೊಂಡಿದೆ.
ಈ ಸಂದರ್ಭ ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಸದಸ್ಯ ಅಮೃತ್ ರಾಜ್, ಡಿಡಿಪಿಐ ರಂಗಧಾಮಯ್ಯ, ಬಿಇಒ ಸುರೇಶ್, ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ.ಕುಮಾರ್, ಸರಕಾರಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲೂಕು ಅಧ್ಯಕ್ಷ ಬಸವರಾಜು, ಮುಖ್ಯೋಪಾಧ್ಯಾಯರಾದ ರಾಣಿ, ಪುಷ್ಪ, ಶ್ವೇತಾ ಸೇರಿದಂತೆ ಶಾಲಾ ಶಿಕ್ಷಕ, ಸಿಬ್ಬಂದಿ ವರ್ಗದವರು ಇದ್ದರು.
Back to top button
error: Content is protected !!