ಕುಶಾಲನಗರ, ಮಾ 14: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಗ್ರಾಮಸಭೆ ಪಂಚಾಯತ್ ಅಧ್ಯಕ್ಷೆ ನಂದಿನಿ ಅಧ್ಯಕ್ಷತೆಯಲ್ಲಿ ಮಂಗಳವಾರ ಗ್ರಾಮದ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯ ಆರಂಭದಲ್ಲಿ ವಿವಿಧ ಇಲಾಖೆ ಆದಿಕಾರಿಗಳ ಗೈರು ಹಾಜರಿ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸಭೆ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ಆಡಳಿತ ಮಂಡಳಿ ಕ್ರಮಕೈಗೊಳ್ಳಲು ಗ್ರಾಮಸ್ಥರು ಆಗ್ರಹಿಸಿದರು.
ಹೆದ್ದಾರಿ ವಿಸ್ತರಣೆ ಸಂದರ್ಭ ವಿದ್ಯುತ್ ಕಂಬಗಳನ್ನು ರಸ್ತೆ ಬದಿಗೆ ಅಳವಡಿಸಲು ಸೂಚಿಸಿ ವರ್ಷ ಕಳೆದರೂ ಇದುವರೆಗೆ ಕ್ರಮವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ರೈತರು, ಗ್ರಾಮಸ್ಥರ ಅಹವಾಲು ಗಳಿಗೆ ಚೆಸ್ಕಾಂ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದ ಗ್ರಾಮಸ್ಥರು, ಕೆಳಹಂತದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್ ಎತ್ತರಿಸುವ ಮೂಲಕ ಸಂಭಾವ್ಯ ಅಪಾಯ ತಪ್ಪಿಸಲು ಕೋರಿದರು.
ಗ್ರಾಮಸಭೆಗೆ ಪಾಲ್ಗೊಂಡಿದ್ದ ಚೆಸ್ಕಾಂ, ಕೃಷಿ, ಅರಣ್ಯ, ಶಿಕ್ಷಣ, ನೀರಾವರಿ, ಆರೋಗ್ಯ ಮತ್ತಿತರ ಇಲಾಖೆ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದರು.
ಪಿಡಿಒ ಶ್ಯಾಂ ತಮ್ಮಯ್ಯ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ತೊರಬೇಕಿದೆ. ಕಡ್ಡಾಯವಾಗಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಎಲ್ಲರೂ ಕಾಳಜಿ ವಹಿಸಬೇಕಿದ ಎಂದರು.
ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾನ ಮಾಡುವ ಸಂಬಂಧ ಸಂದೇಹಗಳಿದ್ದಲ್ಲಿ ಸಭೆಯಲ್ಲಿರುವ ಸೆಕ್ಟರ್ ಅಧಿಕಾರಿಗಳ ಮೂಲಕ ಸ್ಥಳದಲ್ಲೇ ಪರಿಹರಿಸಿಕೊಳ್ಳಲು ಪಿಡಿಒ ಶ್ಯಾಂ ಗ್ರಾಮಸ್ಥರಿಗೆ ಸೂಚಿಸಿದರು.
ಕೃಷಿ ಇಲಾಖೆ ಅಧಿಕಾರಿ ಕಾವ್ಯ ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಯಶೋಧ ಸೇರಿದಂತೆ ಸದಸ್ಯರುಗಳು, ಕಾರ್ಯದರ್ಶಿ ಕುಮಾರಸ್ವಾಮಿ ಇದ್ದರು.
Back to top button
error: Content is protected !!