ಕುಶಾಲನಗರ, ಮಾ 24: ಅಕ್ರಮವಾಗಿ ಮದ್ಯ ಮಾರಾಟ ಪ್ರಕರಣ ಹಿನ್ನಲೆಯಲ್ಲಿ
ಕುಶಾಲನಗರ ತಾಲ್ಲೂಕು, ಹಾರಂಗಿ ಅಂಚೆ, ಹುಲುಗುಂದ ಗ್ರಾಮದ ನಿವಾಸಿ ಸತ್ಯ ಕುಮಾರ್ ಎಂಬ ವ್ಯಕ್ತಿಯ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು.
ಅಕ್ರಮವಾಗಿ ಮಾರಾಟಕ್ಕೆ ಇಟ್ಟಿದ್ದ 3.060 ಲೀ. ಮದ್ಯವನ್ನು ವಶಪಡಿಸಿಕೊಂಡು ಆರೋಪಿ ಸತ್ಯ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸೋಮವಾರಪೇಟೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕಿ ಆರ್.ಎಂ ಚೈತ್ರಾ, ಮೊಕದ್ದಮೆಯನ್ನು ದಾಖಲು ಮಾಡಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Back to top button
error: Content is protected !!