ಕುಶಾಲನಗರ, ಮಾ 28: ಕೂಡಿಗೆ ವಲಯ ಕಾಂಗ್ರೆಸ್ ವತಿಯಿಂದ ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದಲ್ಲಿ ಗ್ಯಾರೆಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು. ವಲಯ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ಹಮೀದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಡಿಯ ನಿವಾಸಿಗಳಿಗೆ ಗ್ಯಾರೆಂಟಿ ಕಾರ್ಡ್ ವಿತರಿಸಿದರು.ಕಾಂಗ್ರೆಸ್ ಮುಖಂಡ ಮಂಥರ್ ಗೌಡ ಮಾತನಾಡಿ, ಬಡವರ, ದೀನದಲಿತಪರ ಯೋಜನೆಗಳು, ಜನಸಾಮಾನ್ಯರ ಸಮಸ್ಯೆಗಳನ್ನು ನಿವಾರಿಸಲು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಅನಿವಾರ್ಯತೆ ಇದೆ. ಜನವಿರೋಧಿ ಬಿಜೆಪಿ ಸರಕಾರ ಕಿತ್ತೊಗೆಯುವಲ್ಲಿ ಮತದಾರರು ಮನಸ್ಸು ಮಾಡಬೇಕಿದೆ ಎಂದರು.ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ದೇಶವನ್ನು ಕಟ್ಟಿ ಅಭಿವೃದ್ದ ಪಥಕ್ಕೆ ಕೊಂಡೊಯ್ದ ಕಾಂಗ್ರೆಸ್ ಸರಕಾರ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಮತದಾರರ ಗಮನ ಸೆಳೆಯಬೇಕಿದೆ ಎಂದರು. ಗ್ರಾಪಂ ಸದಸ್ಯರಾದ ಅನಂತ್, ಅರುಣ್ ರಾವ್, ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್.ರಾಜಾರಾವ್, ಐ.ಎನ್. ಟಿ.ಸಿ. ಪ್ರಮುಖ ಬಿ.ಡಿ.ಅಣ್ಣಯ್ಯ , ಗ್ರಾಮ ಪಂಚಾಯತಿ ಸದಸ್ಯೆ ಲಕ್ಷ್ಮಿ, ಹಾಡಿಯ ಮುಖಂಡರಾದ ಮುತ್ತ, ಉಮೇಶ್, ರವಿ ಸೇರಿದಂತೆ ನೂರಾರು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!