ಕುಶಾಲನಗರ, ಮಾ 31: ಕೂಡ್ಲೂರು ಕೈಗಾರಿಕಾ ಪ್ರದೇಶ ಸುಂದರನಗರ ಗ್ರಾಮದ ಸರ್ವೆ ನಂ 5/1 ರಲ್ಲಿ 1.20. ಎಕ್ರೆ ಜಾಗ ವಶಪಡಿಸಿಕೊಂಡಿದ್ದು ಸದರಿ ಜಾಗವನ್ನು ಗ್ರಾಮಸ್ಥರ ಅನುಕೂಲಕ್ಕೆ ಒದಗಿಸುವಂತೆ ಗ್ರಾಮಸ್ಥರು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ಸದರಿ ಜಾಗದಲ್ಲಿ ಜವರಪ್ಪನಾಯಕ ಹೆಸರಿನ ಕೆರೆಯಿದೆ. ಸರಕಾರದಿಂದ ಕೆರೆ ಹೂಳೆತ್ತುವ ಕಾರ್ಯ ನಡೆದಿತ್ತು. 40-50 ವರ್ಷಗಳಿಂದ ಶವ ಸಂಸ್ಕಾರಕ್ಕೆ ಕೂಡ ಈ ಜಾಗ ಬಳಸಲಾಗಿತ್ತಿತ್ತು.
ಕೋವಿಡ್ ಸಂದರ್ಭದಲ್ಲಿ ಕೂಡ ಇಲ್ಲಿ ಶವಸಂಸ್ಕಾರ ನಡೆಸಲಾಗಿತ್ತು. ಇದೀಗ ಈ ಪ್ರದೇಶವನ್ನು ಕೈಗಾರಿಕಾ ಅಭಿವೃದ್ಧಿ ನಿಗಮ ಗ್ರಾಮಸ್ಥರಿಗೆ ಮಾಹಿತಿ ನೀಡದೆ ವಶಪಡಿಸಿಕೊಂಡು ಖಾಸಗಿ ವ್ಯಕ್ತಿಗೆ ಮಾರಾಟ ಮಾಡಿದೆ. ಸ್ಮಶಾನ ಜಾಗಕ್ಕೆ ಬೇಲಿ ಅಳವಡಿಸಲಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಸುಂದರನಗರ ಗ್ರಾಮಸ್ಥರಿಗೆ ಸ್ಮಶಾನಕ್ಕೆ ಶಾಶ್ವತ ಜಾಗ ಒದಗಿಸಿಕೊಡುವಂತೆ ಗ್ರಾಮಸ್ಥರು ತಹಸೀಲ್ದಾರ್ ಟಿ.ಎಂ.ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
Back to top button
error: Content is protected !!