ಕುಶಾಲನಗರ,ಏ 16: ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು,ಅದಕ್ಕಾಗಿ ನಾವು ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಹಾಗೂ ಕಾವೇರಿ ನದಿ ಸ್ವಚ್ಚತಾ ಆದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಅಭಿಪ್ರಾಯಪಟ್ಟರು.
ಕುಶಾಲನಗರದ ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ವತಿಯಿಂದ ಸೀಜನ್-7 ರ ಬೇಸಿಗೆ ಶಿಬಿರದ ಅಂಗವಾಗಿ ಕಾವೇರಿ ಉದ್ಯಾನವನದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ಮಗು, ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ನಂತರ ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ಪ್ರಮುಖರಾದ ಸಚಿನ್ ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ. ಆದ್ದರಿಂದ ಅಕಾಡೆಮಿಯ ವತಿಯಿಂದ ಬೇಸಿಗೆ ಶಿಬಿರದ ಅಂಗವಾಗಿ ಪ್ರತಿ ವರ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭ ಅಕಾಡೆಮಿಯ ನೃತ್ಯ ಸಂಯೋಜಕರಾದ ಕಿರಣ್, ಚಂದನ್, ಪೋಷಕರಾದ ಅಕ್ಷತಾ, ಇಂದಿರಾ, ಶೃತಿ, ವೀಣಾ,ಶ್ವೇತಾ , ತುಳಸಿ, ಮಾನಸ, ಮಮತಾ,ಸೌಮ್ಯ, ಮತ್ತಿತರರು ಹಾಜರಿದ್ದರು.
Back to top button
error: Content is protected !!