ಅವ್ಯವಸ್ಥೆ

ಕುಶಾಲನಗರ ಬಿಸಿಎಂ ಹಾಸ್ಟೆಲ್ ನಲ್ಲಿ ನೀರಿಲ್ಲದೆ ಪರದಾಡುತ್ತಿರುವ ವಿದ್ಯಾರ್ಥಿಗಳು, ಸಿಬ್ಬಂದಿಗಳು: ಅಧಿಕಾರಿಗಳು‌ ಮೌನ

ಕುಶಾಲನಗರ, ಏ 27: ಕುಶಾಲನಗರದ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಳೆದ ಒಂದೂವರೆ ತಿಂಗಳಿಂದ ನೀರಿನ ಸಮಸ್ಯೆಯಿಂದ ವಿದ್ಯಾರ್ಥಿಗಳು ನಲುಗುತ್ತಿದ್ದರೂ ಸಂಬಂಧಿಸಿದವರು ಗಮನ ಹರಿಸಿಲ್ಲ‌ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಗೋಪಾಲ್ ಸರ್ಕಲ್ ನಲ್ಲಿ
ಖಾಸಗಿ ಕಟ್ಟಡದಲ್ಲಿ ಈ ವಸತಿ ನಿಲಯ ನಡೆಯುತ್ತಿದ್ದು, ನೀರಿನ ಸಮಸ್ಯೆ ಎದುರಾಗಿದ್ದು ಈ ಬಗ್ಗೆ ಕಟ್ಟಡ ಮಾಲೀಕರು, ವಾರ್ಡನ್ ಹಾಗೂ ಇಲಾಖೆ ಅಧಿಕಾರಿಗಳಿಗೆ ವಿಚಾರ ತಿಳಿಸಿದರು ಕೂಡ ಇದುವರೆಗೆ ಸೂಕ್ತ ಕ್ರಮಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಸ್ಥಳೀಯ ಇಂಜನಿಯರಿಂಗ್, ಪಾಲಿಟೆಕ್ನಿಕ್ ಹಾಗೂ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ 80 ವಿದ್ಯಾರ್ಥಿಗಳು ಈ ನಿಲಯದಲ್ಲಿದ್ದು ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿದೆ. ಈ ಹಿನ್ನಲೆಯಲ್ಲಿ ಪ್ರತಿದಿನ ಪುರಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದೀಗ 10 ದಿನದಿಂದ ಟ್ಯಾಂಕರ್ ನೀರು ಕೂಡ ಸ್ಥಗಿತಗೊಂಡಿದೆ. ನಲ್ಲಿ ಸಂಪರ್ಕ ದಲ್ಲಿ ಬರುವ ಅಲ್ಪ ಪ್ರಮಾಣದ ನೀರು ಯಾವುದಕ್ಕೂ ಸಾಲುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ತೀವ್ರ ಬಿಕ್ಕಟ್ಟು ಎದುರಾಗಿದ್ದು ಸಂಬಂಧಿಸಿದವರು ಸೂಕ್ತವಾಗಿ ಸ್ಪಂದಿಸಬೇಕಿದೆ ಎಂದು ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!