ಕಾರ್ಯಕ್ರಮ

ಏಂಜಲ್ಸ್ ವಿಂಗ್ಸ್ ನೃತ್ಯ ಸಂಸ್ಥೆಯ ಬೇಸಿಗೆ ಶಿಬಿರ ಸಮಾರೋಪ

ಕುಶಾಲನಗರ, ಮೇ 02: ಕುಶಾಲನಗರದ ಏಂಜಲ್ಸ್ ವಿಂಗ್ಸ್ ಸ್ಕೂಲ್ ಆಫ್ ಡ್ಯಾನ್ಸ್ ಸಂಸ್ಥೆಯ ಆಶ್ರಯದಲ್ಲಿ ಕುಶಾಲನಗರ ಮತ್ತು ನಂಜರಾಯಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ‌ ಸಮಾರೋಪ ಸಮಾರಂಭ ನಡೆಯಿತು.
ನಂಜರಾಯಪಟ್ಟಣದ ಶ್ರೀ ನಂಜುಂಡೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ದುಬಾರೆ ರ್ಯಾಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ವಿಜು ಚಂಗಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಗೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಏಂಜಲ್ಸ್ ವಿಂಗ್ಸ್ ಸ್ಕೂಲ್ ಮೂಲಕ ವಿದ್ಯಾರ್ಥಿಗಳಲ್ಲಿ ಸದಾಭಿರುಚಿಯ ಕಲೆಗಳ ತರಬೇತಿ ನೀಡುತ್ತಿರುವುದು ಶ್ಲಾಘನೀಯ ವಿಚಾರ. ತರಬೇತಿ ಪಡೆದ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪು ಮೂಡಿಸುವಂತಾಗಲಿ ಎಂದು ಆಶಿಸಿದರು.
ದೇವಾಲಯ ಸಮಿತಿ ಕಾರ್ಯದರ್ಶಿ ಪ್ರೇಮಾನಂದ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕಾ ಆಸಕ್ತಿ ಹೆಚ್ಚಿರಬೇಕು. ಪೋಷಕರು ಕೂಡ ಮಕ್ಕಳ ಅಭಿರುಚಿಯನ್ನು ಅರಿತು ಪ್ರೋತ್ಸಾಹಿಸಿದಾಗ ಮಾತ್ರ ಪ್ರತಿಭೆಯನ್ನು ಬೆಳೆಸಲು ಸಾಧ್ಯ ಎಂದರು.
ಪ್ರಮುಖರಾದ ಸುಮಿತ್ರ, ವಂದನ, ಹರಿಣಾಕ್ಷಿ ಮಾತನಾಡಿದರು.
ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಾವು ಕಲಿತ ಕಲೆಗಳನ್ನು ಪ್ರದರ್ಶಿಸಿದರು.
ಕುಶಾಲನಗರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾಜಿ ಜನಪ್ರತಿನಿಧಿ ಗಣೇಶ್, ಸರಿಗಮಪ ವಿನ್ನರ್ ಪ್ರಗತಿ ಬಡಿಗೇರ್, ಸಂಸ್ಥೆಯ ಅಧ್ಯಕ್ಷ ಆಲ್ಬರ್ಟ್ ಡಿಸೋಜ, ಸಂಸ್ಥಾಪಕರಾದ ಅರ್ಪಿತ್ ಅನೂಪ್ ಡಿಸೋಜ,  ಏಂಜಲ್ ರಶ್ಮಿ ಡಿಸೋಜ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!