ಕುಶಾಲನಗರ, ಮೇ 14: ಕೊಡಗಿನಲ್ಲಿ ಹೊಸ ಮನ್ವಂತರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುನ್ನುಡಿ ಬರೆದಿದ್ದು,
ಇಪ್ಪತೈದು ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ಹೈಕೋರ್ಟ್ ಹಿರಿಯ ವಕೀಲ, ರಾಜ್ಯ ಕಾಂಗ್ರೆಸ್ ನಾಯಕ ಹೆಚ್.ಎಸ್.ಚಂದ್ರಮೌಳಿ ಹರ್ಷ ವ್ಯಕ್ತಪಡಿಸಿದರು.
ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಮತದಾರರು ಬದಲಾವಣೆ ಬಯಸುತ್ತಿದ್ದು ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ತೋರಿಸುತ್ತಿದ್ದಾರೆ ಎಂಬ ಭವಿಷ್ಯ ನಿಜವಾಗಿದೆ. ಕೊಡಗಿನ ಎರಡು ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ಶಾಸಕರು ಸೋತಿರುವುದು ಸಾಧಾರಣ ವಿಷಯವಲ್ಲ. ಮಡಿಕೇರಿ ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿ ವಿದ್ಯಾವಂತ, ವಿಚಾರವಂತ. ಇವರಿಂದ ಮಡಿಕೇರಿ ಕ್ಷೇತ್ರದ ಅಭಿವೃದ್ಧಿ ಖಂಡಿತವಾಗಿಯೂ ಸಾಧ್ಯವಿದೆ. ಐದು ವರ್ಷಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಪ್ರತಿಯೊಂದು ಗ್ರಾಮಗಳಿಗೆ ಮೂಲಭೂತ ಸೌಕರ್ಯ, ಕೊಡಗಿನಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ, ತಾಲ್ಲೂಕಾದ್ಯಂತ ಸರ್ಕಾರದ ಕೆಲಸಗಳಿಗೆ ಮಿನಿ ವಿಧಾನ ಸೌಧ, ಆಟದ ಮೈದಾನಗಳು, ಉದ್ಯೋಗ ಸೃಷ್ಟಿ, ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಭರವಸೆಯನ್ನು ಕಾರ್ಯರೂಪಕ್ಕೆ ತರುವುದ ಹಾಗೂ ಶಾಸಕ ಮಂತರ್ ಗೌಡ ರವರಿಗೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿಯನ್ನು ನೀಡುವುದು ನಮ್ಮ ಕೆಲಸವಾಗಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಇರುವುದರಿಂದ ಕೊಡಗಿನ ಒಬ್ಬ ಅಭ್ಯರ್ಥಿ ಮಂತ್ರಿ ಆಗುವುದು ನಿಶ್ಚಿತ ಎಂದು ತಿಳಿಸಿದರು.
ಕೆಪಿಸಿಸಿ ಪ್ರಮುಖ ಮಂಜುನಾಥ್ ಗುಂಡೂರಾವ್ ಮಾತನಾಡಿ, ಪ್ರಜ್ಞಾವಂತ ಮತದಾರರು ಈ ಬಾರಿ ಕಾಂಗ್ರೆಸ್ ಗೆ ಸಂಪೂರ್ಣ ಬಹುಮತ ನೀಡಿದ್ದಾರೆ. ಕೊಡಗಿನ ಅಭಿವೃದ್ದಿಗೆ ಕಾಂಗ್ರೆಸ್ ಅಗತ್ಯ ರೂಪುರೇಷೆಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ
ಕಾಂತರಾಜ್, ಹರೀಶ್, ಶೇಖರ್ ಇದ್ದರು.
Back to top button
error: Content is protected !!