ಕುಶಾಲನಗರ, ಜೂ 11: ಕೊಡಗಿನ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಎಸ್.ಎನ್.ಬೋಸರಾಜು ಭಾನುವಾರ ಜಿಲ್ಲೆಗೆ ಆಗಮಿಸಿದರು. ಉಸ್ತುವಾರಿ ಸಚಿವ ರನ್ನು ಕೊಡಗು ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರು ಕೊಡಗಿನ ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದರು.
ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಎಸ್ಪಿ ರಾಮರಾಜನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಚಂದ್ರಮೌಳಿ, ಮಂಜುನಾಥ್ ಗುಂಡುರಾವ್, ಶಿವಶಂಕರ್, ಕಿರಣ್, ಖಲೀಮುಲ್ಲಾ, ಜೋಸೆಫ್ ವಿಕ್ಟರ್ ಸೋನ್ಸ್, ಕಾಂತರಾಜು, ಪ್ರಕಾಶ್,ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಸೀಲ್ದಾರ್ ಟಿ.ಎಂ.ಪ್ರಕಾಶ್ ಮತ್ತಿತರರು ಇದ್ದರು
Back to top button
error: Content is protected !!