ಕುಶಾಲನಗರ, ಜು 05: ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಉದ್ಯಮಿ ಕೆ.ಕೆ.ಮಂಜುನಾಥ್ ಕುಮಾರ್ ಅವರಿಗೆ ಈ ಬಾರಿ ನಿಗಮ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ದೊರಕುವ ಸಾಧ್ಯತೆ ಹೆಚ್ಚಿದೆ.
ಪ್ರಮುಖ ನಿಗಮದ ಅಧ್ಯಕ್ಷ ಸ್ಥಾನ ಕೆ.ಕೆ.ಮಂಜುನಾಥ್ ಕುಮಾರ್ ಅವರ ಪಾಲಾಗುವ ಸಾಧ್ಯತೆ ಬಗ್ಗೆ ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಈ ಬಗ್ಗೆ ಮಂಜುನಾಥ್ ಕುಮಾರ್ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ತನ್ನದೇ ಆದ ಪ್ರಮುಖ ಪಾತ್ರ ವಹಿಸಿದ್ದ ಮಂಜುನಾಥ್ ಕುಮಾರ್, ಅಧ್ಯಕ್ಷರಾಗಿದ್ದ ಸಂದರ್ಭ ಜಿಲ್ಲೆಯಲ್ಲಿ ವಿಶೇಷ ಛಾಪು ಮೂಡಿಸಿದ್ದರು.ತಳಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷಕ್ಕೆ ಬಲ ತುಂಬಿದ್ದರು. ಇದು ಕೂಡ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಡಿಪಾಯವಾಗಿದೆ.
Back to top button
error: Content is protected !!