ಕುಶಾಲನಗರ ಜು 20: ಕುಶಾಲನಗರ ಲಯನ್ಸ್ 317 ಡಿ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು.
ಕ್ಲಬ್ ನೂತನ ಅಧ್ಯಕ್ಷರಾಗಿ ಸುಮನ್ ಬಾಲಚಂದ್ರ, ಕಾರ್ಯದರ್ಶಿಯಾಗಿ ಟಿ.ಕೆ.ರಾಜಶೇಖರ್, ಖಜಾಂಚಿ ಯಾಗಿ ನಿತಿನ್ ಎನ್ ಗುಪ್ತ ಅಧಿಕಾರ ಸ್ವೀಕರಿಸಿದರು.
ಲಯನ್ಸ್ ಮಾಜಿ ರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಅಧಿಕಾರ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು, ಲಯನ್ಸ್ ಕ್ಲಬ್ ಸಮಾಜದಲ್ಲಿ ಸಂಬಂಧಗಳನ್ನು ಬೆಸೆಯುವ ಸೇತುವೆಯಂತೆ ಕಾರ್ಯನಿರ್ವಹಿಸಬೇಕಿದೆ.
ನೂತನ ಲಯನ್ಸ್ ಸಂಸ್ಥೆ ಪದಾಧಿಕಾರಿಗಳಿಗೆ
ಜವಾಬ್ದಾರಿ ಹೆಚ್ಚಿದೆ.
ಒಂದು ವರ್ಷ ಅವಧಿಯಲ್ಲಿ ಹೊಸ ಚಿಂತನೆಗಳೊಂದಿಗೆ ಉತ್ತಮ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕುಶಾಲನಗರ ಲಯನ್ಸ್ ಕ್ಲಬ್ ಅನ್ನು ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿಸಬೇಕು. ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಇತರೆ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಹೇಳಿದರು.
ನೂತನ ಸದಸ್ಯರನ್ನು ಕ್ಲಬ್ ಗೆ ಬರಮಾಡಿಕೊಳ್ಳಲಾಯಿತು.
ನೂತನ ಸಾಲಿನ ಅಧ್ಯಕ್ಷ ಸುಮನ್ ಬಾಲಚಂದ್ರ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಹಲವು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ನಿಕಟಪೂರ್ವ ಅಧ್ಯಕ್ಷ ಎಂ.ಎಸ್
ಚಿಣ್ಣಪ್ಪ ಮಾತನಾಡಿದರು.
ಈ ಸಂದರ್ಭ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಅಂಬೇಕಲ್ ನವೀನ್, ವಲಯಾಧ್ಯಕ್ಷ ಸತೀಶ್ ಕುಮಾರ್, ನಿರ್ಗಮಿತ ಖಜಾಂಚಿ ಹೇಮಂತ್ ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಮಡಿಕೇರಿ, ಸುಂಟಿಕೊಪ್ಪ, ಸೋಮವಾರಪೇಟೆ ಕ್ಲಬ್ ಪದಾಧಿಕಾರಿಗಳು ಇದ್ದರು.
Back to top button
error: Content is protected !!