ಕುಶಾಲನಗರ,ಜು22: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಾಗಕ್ಕೆ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಬೇಲಿ ಅಳವಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಆದಂ ಅವರು,
ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಾಗವು, ಖಾಸಗಿ ವ್ಯಕ್ತಿಗಳಿಂದ ಅತಿಕ್ರಮಣಕ್ಕೆ ಪ್ರಯತ್ನಿಸಲಾಗುತ್ತಿತ್ತು. ಈ ಹಿನ್ನಲೆ ಕುಶಾಲನಗರದ ಪ್ರಮುಖರಾದ ವಿ.ಪಿ.ಶಶಿಧರದ ನೇತೃತ್ವದಲ್ಲಿ ಇದರ ವಿರುದ್ಧ ಹೋರಾಟ ನಡೆಸಲಾಗಿತ್ತು. ಇದರ ಫಲವಾಗಿ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಾಗಕ್ಕೆ ಬೇಲಿ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭ ಕುಶಾಲನಗರ ಪುರಸಭಾ ಸದಸ್ಯರಾದ ಆನಂದ್ ಕುಮಾರ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್, ನಿರ್ದೇಶಕರಾದ ಸೋಮಿತ್, ನವ್ಯ, ಜಗದೀಶ್ ಹಾಗೂ ಇನ್ನಿತರರು ಇದ್ದರು.
Back to top button
error: Content is protected !!