ಕಾರ್ಯಕ್ರಮ

ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದ ಶಾಸಕರು

ಕುಶಾಲನಗರ, ಆ 01: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳನ್ನು ಆಲಿಸಿದರು. ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಮುಖಂಡರು ಹಾಗೂ ಆಯಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಿತು.
ಈ ಸಂದರ್ಭ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ತಮ್ಮ ಕೆಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದು ತಮ್ಮ ಅಹವಾಲುಗಳನ್ನು ಹಾಗೂ ಅದಕ್ಕೆ ಆಗಬೇಕಿರುವ ಪರಿಹಾರಗಳನ್ನು ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭ ಶಾಸಕರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಆದೇಶಿಸಿ, ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ಒದಗಿಸಿಕೊಡಬೇಕೆಂದು ಸೂಚಿಸಿದರು.
ಈ ಸಂದರ್ಭ ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಾಪಂ ಇಒ ಜಯಣ್ಣ, ಉಪತಹಸೀಲ್ದಾರ್ ಮಧುಸೂದನ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ ವಿ.ಪಿ. ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್,‌ಪ್ರಮುಖರಾದ ಶಿವಶಂಕರ್, ಕಿರಣ್, ಜಿ.ಬಿ.ಜಗದೀಶ್ ಮತ್ತಿತರರು ಇದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!