ಕುಶಾಲನಗರ, ಸೆ 23: ಕರ್ನಾಟಕ “ವು ಸುವರ್ಣ ಸಂಭ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಸೆಪ್ಟೆಂಬರ್ 28 ರಂದು ಗುರುವಾರ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ “ಸಿರಿ ಸಂಭ್ರಮ” ಎಂಬ ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಪ್ರಾರಂಭಗೊಂಡ ಕನ್ನಡ ಸಿರಿ ಸ್ನೇಹ ಬಳಗ ಕನ್ನಡ ಭಾಷೆಗೆ ಪ್ರಾಧ್ಯಾನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ 50 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಚಿಂತನೆ ಹೊಂದಲಾಗಿದೆ. ಕವಿಗೋಷ್ಠಿ ಕಾರ್ಯಕ್ರಮ ಮೂಲಕ ಪ್ರಸಕ್ತ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಕವಿಯತ್ರಿ ಶರ್ಮಿಳ ರಮೇಶ್ ಅವರ ಕೃತಿಗಳನ್ನು ಬಿಡುಗಡೆಗೊಳಿಸಲಾಗುವುದು
ಎಂದು ತಿಳಿಸಿದರು.
ಜಿಲ್ಲೆಯ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಕವಿಗಳು ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್( 9980988123), ಕುಡೇಕಲ್ ಸಂತೋಷ್(9972538584) ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಳಗದ ಸದಸ್ಯರಾದ ಎಂ.ಡಿ.ರಂಗಸ್ವಾಮಿ, ನಾಗೇಗೌಡ, ನಾಗೇಶ್, ರಾಮಚಂದ್ರ ಇದ್ದರು.
Back to top button
error: Content is protected !!