ಕುಶಾಲನಗರ, ಅ 04:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಕ್ರೀಡಾಪಟುಗಳಿಗೆ ದಸರಾ ಕ್ರೀಡಾಕೂಟವು ಹೆಚ್ಚು ಉಪಯುಕ್ತವಾಗಿರುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ, ಮುನ್ನುಗ್ಗಲು ಇಂತಹ ಕ್ರೀಡಾಕೂಟಗಳು ಪೂರಕವಾಗುತ್ತವೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಪರಸ್ಪರ ಪ್ರೀತಿ ವಿಶ್ವಾಸ, ಹಾಗೂ ಸಹಬಾಳ್ವೆ ಯೊಂದಿಗೆ ಭಾತ್ರತ್ವ ಬೆಳೆಸಿಕೊಳ್ಳಲು ಸಹಕಾರಿಯಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯ ಮಾತನಾಡಿದರು.
ಈ ಸಂದರ್ಭ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ದೇವುಕುಮಾರ್, ಸುಬ್ಬಯ್ಯ, ತರಬೇತುದಾರ ಸುರೇಶ್, ಮಂಜುನಾಥ್, ಅಂತೋಣಿ ಡಿಸೋಜ, ದಿನಮಣಿ, ಮಹಾಬಲ, ಸೇರಿದಂತೆ ವಿವಿಧ ವಿಭಾಗದ ತರಬೇತಿದಾರರು ಹಾಜರಿದ್ದರು.
ಮೈಸೂರು ವಿಭಾಗದ ಕ್ರೀಡಾಕೂಟದಲ್ಲಿ ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಜಿಲ್ಲೆಯ ಯೋಗ, ಜಿಮ್ನಾಸ್ಟಿಕ್ ಕ್ರೀಡಾಪಟುಗಳು, ತರಬೇತುದಾರರು ಭಾಗವಹಿಸಿದ್ದರು.
Back to top button
error: Content is protected !!