ಪ್ರಕಟಣೆ

ವಿಶ್ವಕರ್ಮ ಸಮುದಾಯ; ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಿದೆ.
ರಾಜ್ಯ ಸರ್ಕಾರದ/ನಿಗಮದ ಯೋಜನೆಗಳ ವಿವರ: ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ). ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿದ್ದು, ಸಣ್ಣ ಅಥವಾ ಅತೀ ಸಣ್ಣ ರೈತರಾಗಿರಬೇಕು.
ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ https://kvcdcl.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ.080-22374848/ 7899899039 ಸಂಪರ್ಕಿಸಿ ಪಡೆಯಬಹುದು. ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೂರವಾಣಿ ಸಂಖ್ಯೆ: 08272-221656 ಮೂಲಕ ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!