ರಾಜಕೀಯ
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಆಕಾಂಕ್ಷಿ ಡಾ.ಬಿ.ಜೆ.ವಿಜಯ್ ಕುಮಾರ್
ಕುಶಾಲನಗರ, ಅ 10: ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಡಾ. ಬಿ.ಜೆ ವಿಜಯ ಕುಮಾರ್ ಅವರು ಸೋಮವಾರ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರನ್ನು ಕುಶಾಲನಗರದಲ್ಲಿ ಭೇಟಿಯಾಗಿ ಪಕ್ಷ ಸಂಘಟನೆ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಈ ಸಂಧರ್ಭ ಅವರು ಚರ್ಚಿಸಿದರು.ನಂತರ ಮಾಧ್ಯಮದವರೊಡನೆ ಮಾತನಾಡಿದ ವಿಜಯ್ ಕುಮಾರ್ ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಖಂಡಿತವಾಗಿಯೂ ಈ ಬಾರಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತ ಹಾಗೂ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ. ಎಂದರು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾತನಾಡಿ ಕೊಡಗು ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಖಂಡಿತ ಪಕ್ಷ ಯಾರಿಗೆ ಟಿಕೆಟ್ ನೀಡಿದರು ಕೊಡಗಿನ ಭಾಗದಿಂದ ಅಭ್ಯರ್ಥಿಗೆ ಹೆಚ್ಚಿನ ರೀತಿಯಲ್ಲಿ ಬಹುಮತ ಬರುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು
ಈ ಸಂಧರ್ಭ ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಶಿವಪ್ರಸಾದ್, ಪ್ರಮುಖರಾದ ಪದ್ಮನಾಭ ದಾಸನೂರು, ಸಂತೋಷ್ ಮೊಳೆಯೂರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಮುಖರು ಉಪಸ್ಥಿತರಿದ್ದರು.