ಕುಶಾಲನಗರ ಅ.16: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಶ್ರೀ ಮಹಾದೇವಿ ಸನ್ನಿಧಿಯಲ್ಲಿ 15 ರಿಂದ 23 ರ ವರೆಗೆ ನಡೆಯುವ ನವರಾತ್ರಿ ಪೂಜ್ಯೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿವೆ.
ಇದರ ಅಂಗವಾಗಿ ದೇವಾಲಯ ಆವರಣದಲ್ಲಿ ಪ್ರತಿ ದಿನ ಸಂಜೆ 7 ಗಂಟೆಯಿಂದ 8 ಗಂಟೆಯವರೆಗೆ ಭಕ್ತ ವೃಂದದವರ ಸಹಕಾರದೊಂದಿಗೆ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ಕಾರ್ಯಕ್ರಮ ಆರಂಭಗೊಂಡಿದೆ.
ಈ ಪೂಜ್ಯೋತ್ಸವ ಕಾರ್ಯಕ್ರಮದಲ್ಲಿ ಹುದುಗೂರು ,ಹಾರಂಗಿ , ಮದಲಾಪುರ ಮಾವಿನಹಳ್ಳ ಸೇರಿದಂತೆ ಸುತ್ತಮುತ್ತಲಿನ ನೂರಾರು ಭಕ್ತರು ಭಾಗವಹಿಸುತ್ತಿದ್ದಾರೆ. ಪೂಜಾ ಕಾರ್ಯಕ್ರಮದ ನಂತರ ಮಹಾಮಂಗಳಾರತಿ , ಪ್ರಸಾದ ವಿನಿಯೋಗ, ದಿನಂಪ್ರತಿ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವು ನಡೆಯುತ್ತಿದೆ. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಂ. ಚಾಮಿ, ಕಾರ್ಯದರ್ಶಿ ಸುರೇಶ್, ಸೇರಿದಂತೆ ಸಮಿತಿಯ ನಿರ್ದೇಶಕರು , ಸುತ್ತಮುತ್ತಲಿನ ಪ್ರದೇಶಗಳ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!