ಕುಶಾಲನಗರ, ಅ 28: ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ 2023-24 ನೇ ಸಾಲಿನ ಗ್ರಾಮ ಸಭೆಯು ಸಮುದಾಯ ಭವನದಲ್ಲಿ ನಡೆಯಿತು.
ಮೊದಲಿಗೆ ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರವಾದ ಕಾರ್ಯಕ್ರಮಗಳ ವಿವರಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಸ್ಥಳೀಯ ಗ್ರಾಮಸ್ಥರು ತಮ್ಮ ತಮ್ಮ ಉಪ ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಅಗಬೇಕಾಗಿರುವ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ತಿಳಿಸಿದರು.
ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆ ಪಟ್ಟಿ ತಯಾರಿ ಸೇರಿದಂತೆ ವಿವಿಧ ಫಲಾನುಭವಿಗಳ ಆಯ್ಕೆ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಬಗ್ಗೆ ಚರ್ಚೆಗಳು ನಡೆದವು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾಬಾಯಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ಧಿಗೆ ಸಹಕಾರ ನೀಡುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ನೋಡೆಲ್ ಅಧಿಕಾರಿ ಲೋಕೇಶ್, ಗ್ರಾಪಂ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಧರ್ಮಪ್ಪ, ಶ್ರೀಕಾಂತ್, ಪ್ರದೀಪ್, ಭಾಗೀರಥಿ, ಸರಿತ, ಗೀತಾ, ಲಕ್ಷ್ಮಿ ಉಪಸ್ಥಿತರಿದ್ದರು.
Back to top button
error: Content is protected !!