ಕುಶಾಲನಗರ, ನ 02: ಹೆಬ್ಬಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯು ಅಧ್ಯಕ್ಷೆ ಅರುಣಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ 2022-23 ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಬಗ್ಗೆ ಮತ್ತು 15 ನೇ ಹಣಕಾಸು ಯೋಜನೆಯ ಕಾಮಗಾರಿಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವು.
ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಕಾಮಗಾರಿಗಳು ನಡೆದ ಬಗ್ಗೆ , ಹಾಗೂ ಖರ್ಚು ವೆಚ್ಚದ ಬಗ್ಗೆ ಸಭೆಯಲ್ಲಿ ಸಮರ್ಪಕವಾದ ಮಾಹಿತಿಯನ್ನು ಬಯಸಿದರು. ನಂತರ ಕಾಮಗಾರಿಗಳು ನಡೆದ ವರದಿ ಆಧಾರದಲ್ಲಿ ಹೆಚ್ಚು ಹಣವನ್ನು ಖರ್ಚು ಮಾಡಲಾಗಿದೆ ಎಂಬ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು. ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮದ ಅಧಿಕಾರಿ ದಿನೇಶ್ ಸಭೆಯ ನಂತರ ಸ್ಧಳ ಪರಿಶೀಲನೆ ಮಾಡಿ ವರದಿಯನ್ನು ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು, ಮತ್ತು 15ನೇ ಹಣಕಾಸು ಯೋಜನೆಗೆ ಸಂಬಂಧಿಸಿದಂತೆ ವಿವಿಧ ಉಪ ಗ್ರಾಮಗಳಾದ ಮರೂರು, ಹಳೆಗೊಟೆ, ಹುಲುಸೆ, 6ನೇ ಹೊಸಕೋಟೆ ವ್ಯಾಪ್ತಿಯ ಕುಡಿಯುವ ನೀರಿನ ವ್ಯವಸ್ಥೆ ದುರಸ್ತಿಗೆ ಸಂಬಂಧಿಸಿದಂತೆ ಕಾಮಗಾರಿಗಳು ನಡೆದ ವಿಷಯಗಳ ಬಗ್ಗೆ ಚರ್ಚೆಗಳು ನಡೆದ ಬಗ್ಗೆ ಗ್ರಾಮಸ್ಥರಿಂದ ಅನುಮೋದನೆ ಪಡೆಯಲಾಯಿತು. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ನೋಂದಣಿಯನ್ನು ಗ್ರಾಮ ಪಂಚಾಯತಿಯಲ್ಲಿ ನೊಂದಣಿ ಮಾಡಿಕೊಂಡು ಉದ್ಯೋಗ ಚೀಟಿಯನ್ನು ಪಡೆದುಕೊಂಡು ಯೋಜನೆಯ ಪ್ರಯೋಜನ ಪಡೆಯುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಹೆಬ್ಬಾಲೆ ಪಶು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆರ್.ಸಿಂಧೆ. ತಾಲ್ಲೂಕು ಮಟ್ಟದ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮದ ಅಧಿಕಾರಿ ದಿನೇಶ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣ್ ಕುಮಾರಿ, ಉಪಾಧ್ಯಕ್ಷೆ ಲತಾಕುಮಾರಿ, ಸದಸ್ಯರಾದ ಶಿವನಂಜಪ್ಪ, , ಚಂದ್ರಶೇಖರ್ ಜೋಗಿ, ಪರಮೇಶ್, ಅಭಿವೃದ್ಧಿ ಅಧಿಕಾರಿ ಅರುಣ್ ಭಾಸ್ಕರ್, ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಹಾಯಕ ಇಂಜಿನಿಯರ್ ಕಿಶೋರ್ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!