ಕುಶಾಲನಗರ, ನ 18: ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು, ಪ್ರಮುಖರು ಕೂಡಿಗೆ ವೃದ್ದಾಶ್ರಮದಲ್ಲಿ ಆಚರಿಸಿದರು.
ಖುದ್ದು ಶಾಸಕ ಮಂಥರ್ ಗೌಡ ಅವರು ವೃದ್ದಾಶ್ರಮಕ್ಕೆ ಭೇಟಿ ನೀಡಿ ಆಶ್ರಮವಾಸಿಗಳೊಂದಿಗೆ ಕೇಕ್ ಕತ್ತರಿಸಿ ವೃದ್ದರಿಗೆ ಹಂಚಿದರು.
ಕುಶಾಲನಗರ ಹೋಬಳಿ ಕಾರ್ಮಿಕ ಘಟಕದ ಅಧ್ಯಕ್ಷ ಪ್ರಸನ್ನ ಮತ್ತು ಸ್ನೇಹಿತರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಟಿ.ಪಿ.ಹಮೀದ್, ಕೂಡಿಗೆ, ಕೂಡುಮಂಗಳೂರು ಕಾಂಗ್ರೆಸ್ ಪ್ರಮುಖರಾದ ಕೆ.ಸಿ.ಮಧು, ಪುನಿತ್, ಮಧುಚಂದ್ರ ಮತ್ತಿತರರು ಇದ್ದರು.
ಇದೇ ಸಂದರ್ಭ ಆಶ್ರಮವಾಸಿಗಳಿಗೆ ಹಣ್ಣುಹಂಪಲು ವಿತರಣೆ, ಭೋಜನ ವ್ಯವಸ್ಥೆ ಏರ್ಪಡಿಸಲಾಗಿತ್ತು.