ಕುಶಾಲನಗರ, ನ 19: ಕರ್ನಾಟಕ ಚಾಲಕರ ಒಕ್ಕೂಟ ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ ನವೆಂಬರ್ 21 ರಂದು ಕುಶಾಲನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಒಕ್ಕೂಟದ ಸಂಸ್ಥಾಪಕರು ಹಾಗೂ ರಾಜ್ಯಧ್ಯಕ್ಷ ಜಿ.ನಾರಾಯಣ ಸ್ವಾಮಿ, ಸಂಸದ ಪ್ರತಾಪ್ ಸಿಂಹ, ಶಾಸಕ ಮಂಥರ್ ಗೌಡ, ಮಾಜಿ ಶಾಸಕ ಅಪ್ಪಚ್ಚುರಂಜನ್, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಭವ್ಯ ಮೆರವಣಿಗೆ, ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.
Back to top button
error: Content is protected !!