ಪ್ರತಿಭಟನೆ

ಭೋದಕೇತರ ಸಿಬ್ಬಂದಿಗಳಿಂದ ಪ್ರತಿಭಟನೆ. ಜಿಲ್ಲಾ ಕಾವಲು ಪಡೆಯ ಬೆಂಬಲ.

ಕುಶಾಲನಗರ ಡಿ. 21: ಚಿಕ್ಕ ಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಲು ಒತ್ತಾಯಿಸಿ ಕೇಂದ್ರದ ಹೊರ ಆವರಣದಲ್ಲಿ 24, ಬೋಧಕರ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿರುವರಿಗೆ ಜಿಲ್ಲಾ ಕರ್ನಾಟಕ ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ. ಕೃಷ್ಣ ನವರ ತಂಡದವರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿದ್ದಾಗಿನಿಂದಲೂ, ಸ್ನಾತಕೋತ್ತರ ಕೇಂದ್ರ ಆರಂಭವಾದಾಗಿನಿಂದಲೂ ಸೇವೆಯಲ್ಲಿದ್ದ 24 ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡಲಾಗಿದೆ. ಇದರಿಂದಾಗಿ ಬೋಧಕೇತರಗಳಿಗೆ ಬಾರಿ ಅನ್ಯಾಯವಾಗಿದೆ ಎಂದು ಆರೋಪಿಸಿದರು

44. ಮಂದಿ ಬೋಧಕೇತರ ಸಿಬ್ಬಂದಿಗಳ ಪೈಕಿ 18 ಮಂದಿಯನ್ನು ‌ಮಾತ್ರ ಸೇವೆಯಲ್ಲಿ ಮುಂದುವರೆಸಿದ್ದು ಕಳೆದ 8-10 ವರ್ಷಗಳಿಂದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ, ಎಲ್ಲಾ ಅರ್ಹತೆ ಹೊಂದಿರುವ ಸಿಬ್ಬಂದಿಗಳನ್ನು ಕೈಬಿಡಲಾಗಿದೆ. ಇದು ಸರಿಯಾದ ಕ್ರಮವಲ್ಲಾ ಎಂದು ಪ್ರತಿಭಟನೆ ನಿರತರ ಜೊತೆಯಲ್ಲಿ ಭಾಗವಹಿಸಿ ಎಂ .ಕೃಷ್ಣ ಮಾತಾನಾಡಿದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯ ಕುಲಪತಿಗಳಿಗೆ ಕಾವಲು ಪಡೆಯ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ, ಯುವ ಘಟಕದ ಅಧ್ಯಕ್ಷ ಸಮ್ಮಿರ್, ಸಮಿತಿಯ ಗಣೇಶ್, ಆಲಿ ಸೇರಿದಂತೆ

ಪ್ರತಿಭಟನಾ ನಿರತರಾದ ಸವಿತಾ ರಾಣಿ, ಕೆ.ಜೆ.ಹರೀಶ್, ಎ.ಆರ್.ಗಣೇಶ್, ಯೋಗೇಶ್ , ಅನೇಕ ಮಂದಿ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!