ಕುಶಾಲನಗರ, ಜು 09:- ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನು ಮಾಲು ಸಹಿತ ಮುಟ್ಟುಗೋಲು ಹಾಕುವಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಸರಕು ಸಹಿತ ಭಾರೀ ವಾಹನಗಳಿಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಅಕ್ರಮವಾಗಿ ಭಾರೀ ವಾಹನದಲ್ಲಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವಾಹನವು ಸಿದ್ದಾಪುರದ ಅಂಬೇಡ್ಕರ್ ನಗರ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿತ್ತು. ಪೊಲೀಸರ ಕಣ್ತಪ್ಪಿಸಿ ಬದಲಿವಾಹನದಲ್ಲಿ ಮರದದಿಮ್ಮಿಗಳನ್ನು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಸಂಧರ್ಭದಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾಲು ಸಹಿತ ವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
Back to top button
error: Content is protected !!